ಐಪಿಎಲ್ 2021 ಭಾಗ-2 – ಸೆಪ್ಟಂಬರ್ 19ರಂದು ಸಿಎಸ್ ಕೆ – ಮುಂಬೈ ಇಂಡಿಯನ್ಸ್ ಮುಖಾಮುಖಿ
2021ರ ಐಪಿಎಲ್ ಟೂರ್ನಿಯ ಮುಂದುವರಿದ ಭಾಗ ಸೆಪ್ಟಂಬರ್ 19ರಿಂದ ಯುಎಇನಲ್ಲಿ ಆರಂಭವಾಗಲಿದೆ. ಟೂರ್ನಿಯ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.
ಮುಂದುವರಿದ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಅಕ್ಟೋಬರ್ 15ರಂದು ಫೈನಲ್ ಪಂದ್ಯ ನಡೆಯಲಿದೆ. ನಂತರ ಅಕ್ಟೋಬರ್ 17ರಿಂದ ಯುಎಇನಲ್ಲಿ ಟಿ-ಟ್ವೆಂಟಿ ವಿಶ್ವಕಪ್ ಟೂರ್ನಿ ನಡೆಯಲಿದೆ.
14ನೇ ಆವೃತ್ತಿಯ ಐಪಿಎಲ್ ಟೂರ್ನಿ ಭಾರತದಲ್ಲೇ ನಡೆದಿತ್ತು. ಆದ್ರೆ ಕೋವಿಡ್ ನಿಂದಾಗಿ ಪಂದ್ಯ ಸ್ಥಗಿತಗೊಂಡಿತ್ತು. ಹೀಗಾಗಿ ಬಿಸಿಸಿಐ ಈಗ ಯುಎಇನಲ್ಲಿ ಟೂರ್ನಿಯನ್ನು ಆಯೋಜನೆ ಮಾಡಲು ನಿರ್ಧರಿಸಿದೆ.
ದುಬೈ ನಲ್ಲಿ 13 ಪಂದ್ಯಗಳು ನಡೆದ್ರೆ, ಹತ್ತು ಪಂದ್ಯಗಳು ಶಾರ್ಜಾದಲ್ಲಿ ನಡೆಯಲಿದೆ. ಹಾಗೇ ಎಂಟು ಪಂದ್ಯಗಳು ಅಬುಧಾಬಿಯಲ್ಲಿ ನಡೆಯಲಿದೆ. ಒಟ್ಟು 31 ಪಂದ್ಯಗಳು ನಡೆಯಲಿವೆ.
ಸೆಪ್ಟಂಬರ್ 15ರಂದು ಇಂಗ್ಲೆಂಡ್ ಮತ್ತು ಟೀಮ್ ಇಂಡಿಯಾ ಆಟಗಾರರು ಯುಎಇನಲ್ಲಿ ತಮ್ಮ ತಮ್ಮ ತಂಡಗಳನ್ನು ಸೇರಿಕೊಳ್ಳಲಿದ್ದಾರೆ. ಇನ್ನುಳಿದಂತೆ ಫ್ರಾಂಚೈಸಿಗಳು ಟೂರ್ನಿಯ ಸಿದ್ಧತೆ ಮಾಡಿಕೊಳ್ಳುತ್ತಿವೆ. ಯುಎಇನ ಸರ್ಕಾರ ಮತ್ತು ಬಿಸಿಸಿಐನ ಕೋವಿಡ್ ಮಾರ್ಗಸೂಚಿಗಳನ್ನು ಎಲ್ಲಾ ಫ್ರಾಂಚೈಸಿಗಳು ಕಡ್ಡಾಯವಾಗಿ ಪಾಲಿಸಲೇಬೇಕಿವೆ. ಅಷ್ಟೇ ಅಲ್ಲ, ಮೈದಾನದಲ್ಲಿ ಪ್ರೇಕ್ಷಕರಿಗೆ ಪಂದ್ಯ ನೋಡುವ ಅವಕಾಶವೂ ಇಲ್ಲ.