ನಿಗದಿತ ವೇಳಾಪಟ್ಟಿಯಂತೆ ಐಪಿಎಲ್ ನಡೆಯುತ್ತೆ – ಬಿಸಿಸಿಐ ಬಿಗ್ ಬಾಸ್ ಸ್ಪಷ್ಟನೆ..!
ನಿಗದಿತ ವೇಳಾಪಟ್ಟಿಯಂತೆ 2021ರ ಐಪಿಎಲ್ ಟೂರ್ನಿ ನಡೆಯುತ್ತದೆ. ಯಾವುದೇ ಆತಂಕ ಬೇಡ ಎಂದು ಬಿಸಿಸಿಐ ಬಿಗ್ ಬಾಸ್ ಸೌರವ್ ಗಂಗೂಲಿ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ವಾರಾಂತ್ಯದ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಸೌರವ್ ಗಂಗೂಲಿ ಐಪಿಎಲ್ ಟೂರ್ನಿಯ ಬಗ್ಗೆ ಸ್ಪಷ್ಟನೆ ಮಾಡಿದ್ದಾರೆ.
ಸದ್ಯ ಭಾರತದಲ್ಲಿ ಕೋವಿಡ್ -19 ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಅಲ್ಲದೆ ಐಪಿಎಲ್ ನಲ್ಲಿ ಆಡುತ್ತಿರುವ ಆಟಗಾರರು ಕೂಡ ಕೊರೋನಾ ಸೋಂಕು ತಗುಲಿದ್ದು, ಐಸೋಲೇಷನ್ ನಲ್ಲಿದ್ದಾರೆ.
ಈ ನಡುವೆ ವಾಂಖೇಡೆ ಮೈದಾನದ ಹತ್ತು ಮಂದಿ ಸಿಬ್ಬಂದಿಗಳಿಗೂ ಕೋವಿಡ್ -19 ದೃಢಪಟ್ಟಿದೆ, ವಾಂಖೇಡೆ ಮೈದಾನದಲ್ಲಿ ಏಪ್ರಿಲ್ 10ರಿಂದ 25ರವರೆಗೆ ಪಂದ್ಯಗಳು ನಡೆಯಲಿವೆ. ಏಪ್ರಿಲ್ 10ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಹೋರಾಟ ನಡೆಸಲಿವೆ.
ಮಹಾರಾಷ್ಟ್ರ ಸರ್ಕಾರ ಕಟ್ಟು ನಿಟ್ಟಿನ ಲಾಕ್ ಡೌನ್ ಮಾರ್ಗಸೂಚಿಗಳನ್ನು ಹೊರಡಿಸಿದೆ. ಶುಕ್ರವಾರ ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯ ತನಕ ಲಾಕ್ ಡೌನ್ ಇರಲಿದೆ.
ಇನ್ನೊಂದೆಡೆ ಮುಂಬೈನಲ್ಲಿ ಐಪಿಎಲ್ ಪಂದ್ಯ ನಡೆಸಲು ಸಾಧ್ಯವಾಗದೇ ಇದ್ರೆ ಹೈದ್ರಬಾದ್ ಗೆ ಪಂದ್ಯಗಳನ್ನು ಶಿಫ್ಟ್ ಮಾಡುವ ಪ್ಲಾನ್ ಕೂಡ ಬಿಸಿಸಿಐ ಮುಂದಿದೆ.