IPL 2022 Auction | ಮೆಗಾ ಹರಾಜು ದಿನಾಂಕ ಬದಲಾವಣೆ IPL saaksha tv
ಬಹು ನಿರೀಕ್ಷಿತ IPL-2022 ಮೆಗಾ ಹರಾಜು ಪ್ರಕ್ರಿಯೆ ಮುಂದೂಡುವ ಸಾಧ್ಯತೆಗಳಿವೆ.
ಕರ್ನಾಟಕ ಸರ್ಕಾರದ ಇತ್ತೀಚಿನ ಕೋವಿಡ್ ನಿಯಮಗಳ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬೆಂಗಳೂರಿನ ಬದಲಾಗಿ ಬೇರೆ ಸ್ಥಳಗಳಲ್ಲಿ ಹರಾಜು ನಡೆಸಲು ಚಿಂತನೆ ನಡೆಸಿದೆ.
ಮೂಲಗಳ ಪ್ರಕಾರ ಕೋಲ್ಕತ್ತಾ, ಕೊಚ್ಚಿ ಮತ್ತು ಮುಂಬೈ ಹರಾಜು ನಡೆಯುವ ಸಾಧ್ಯತೆ ಇದೆ.
ಈ ಹಿಂದೆ ಫೆಬ್ರವರಿ 12 ಮತ್ತು 13ರಂದು ಐಪಿಎಲ್ ಹರಾಜು ಪ್ರತಿಕ್ರಿಯೆಗೆ ಮುಹೂರ್ತ ಫಿಕ್ಸ್ ಮಾಡಲಾಗಿತ್ತು.
ಆದ್ರೆ ಕೊರೊನಾ ಕಾರಣದಿಂದಾಗಿ ಹೊಸ ದಿನಾಂಕಗಳನ್ನು ಅಂತಿಮಗೊಳಿಸಲು ಬಿಸಿಸಿಐ ಮುಂದಾಗಿದೆ ಎಂದು ತಿಳಿದುಬಂದಿದೆ.
ನಮ್ಮ ಕೈಯಲ್ಲಿ ಏನೂ ಇಲ್ಲ. ಕೆಲವೊಮ್ಮೆ ಪ್ರತಿಕೂಲ ಪರಿಸ್ಥಿತಿಗಳು ಉದ್ಭವಿಸುತ್ತವೆ. ಕೋವಿಡ್ ನಿಯಮಗಳಿವೆ.
ನಾವು ಪ್ರಸ್ತುತ ಪರಿಸ್ಥಿತಿಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದೇವೆ. ಆಯಾ ರಾಜ್ಯಗಳ ಕ್ರಿಕೆಟ್ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಮಾತನಾಡುತ್ತಿದ್ದೇವೆ.
ಸ್ಥಳ ಬದಲಾವಣೆ ಮಾಡಬೇಕಾದರೆ ಎಲ್ಲ ರೀತಿಯ ಚರ್ಚೆಯ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.