IPL 2022 ವೇಳಾಪಟ್ಟಿ ಪ್ರಕಟ : ಆರ್ ಸಿಬಿಗೆ ಮೊದಲ ಎದುರಾಳಿ ಯಾರು ಗೊತ್ತಾ..?
2022ರ ಇಂಡಿಯನ್ ಪ್ರಿಮಿಯರ್ ಲೀಗ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮಾರ್ಚ್ 26 ರಿಂದ ಪಂದ್ಯಾವಳಿಗಳು ಆರಂಭವಾಗಲಿವೆ. ಈ ಬಾರಿ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತು ಕಳೆದ ಬಾರಿಯ ಫೈನಲಿಸ್ಟ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಹೊಸ ನಿಯಮಗಳೊಂದಿಗೆ ಕ್ರಿಕೆಟ್ ಹಬ್ಬ ಐಪಿಎಲ್ ಗೆ ತಯಾರಾಗಿರುವ ಬಿಸಿಸಿಐ, ಇಂದು ವೇಳಾಪಟ್ಟಿಯನ್ನ ಬಿಡುಗಡೆ ಮಾಡಿದೆ. ಮಾರ್ಚ್ 26ರಂದು ಸಂಜೆ 7.30ಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಸಿಎಸ್ಕೆ ಹಾಗೂ ಕೆಕೆಆರ್ ತಂಡಗಳ ನಡುವೆ ಹಣಾಹಣಿ ನಡೆಯಲಿದೆ.
ಮಾ.27ರಂದು ಪಂದ್ಯಾವಳಿಯ ಮೊದಲ ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಹಣಾಹಣಿ ನಡೆಸಿದರೆ. 2ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ.
ಹೊಸ ತಂಡಗಳಾದ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಂಬೈನ ವಾಂಖೆಡೆ ಅಂಗಳದಲ್ಲಿ ಮುಖಾಮುಖಿಯಾಗಲಿವೆ.
ಈ ಬಾರಿಯ ಐಪಿಎಲ್ ನಲ್ಲಿ ಒಟ್ಟು 12 ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. 6 ಪಂದ್ಯಗಳು ಶನಿವಾರದಂದು ನಡೆದರೆ, 6 ಪಂದ್ಯಗಳು ಭಾನುವಾರದಂದು ನಡೆಯಲಿದೆ. ಡಬಲ್ ಹೆಡರ್ ದಿನದಂದು ಮೊದಲ ಪಂದ್ಯ ಮಧ್ಯಾಹ್ನ 3.30ರಿಂದ ನಡೆಯಲಿದ್ದು, ಎರಡನೇ ಪಂದ್ಯ ರಾತ್ರಿ 7.30ರಿಂದ ನಡೆಯಲಿದೆ.
ಪಂದ್ಯಾವಳಿಯ ಕೊನೆಯ ಲೀಗ್ ಪಂದ್ಯ ಮೇ 22ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಸನ್ರೈಸರ್ಸ್ ಹೈದ್ರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ipl-2022-BCCI announces schedule for TATA IPL 2022