IPL 2022 | ಐಪಿಎಲ್ ಅಭಿಮಾನಿಗಳಿಗೆ ಸಿಹಿ ಸುದ್ದಿ..!
15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ಭರ್ಜರಿಯಾಗಿ ಆರಂಭಗೊಂಡು ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.
ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ವರ್ಸಸ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಪಂದ್ಯದಿಂದ ಹಿಡಿದು ಶುಕ್ರವಾರ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯದ ವರೆಗೂ ಐಪಿಎಲ್ ಅಭಿಮಾನಿಗಳಿಗೆ ಬೊಂಬಾಟ್ ಎಂಟರ್ ಟೈನ್ಮೆಂಟ್ ದೊರಕಿದೆ.
ಇವತ್ತು ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಸಂಜೆಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡು ಸೆಣಸಾಡಲಿವೆ.
ಈ ನಡುವೆ ಬಿಸಿಸಿಐ, ಇಂಡಿಯನ್ ಪ್ರಿಮಿಯರ್ ಲೀಗ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.
ಐಪಿಎಲ್ ಪಂದ್ಯಗಳನ್ನ ವೀಕ್ಷಿಸಲು ಈವರೆಗೆ ಕೇವಲ ಶೇ.25ರಷ್ಟು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡಲಾಗಿದೆ.
ಆದ್ರೆ ಏಪ್ರಿಲ್ ಆರರಿಂದ ಶೇಕಡಾ 50 ಕ್ಕೆ ಹೆಚ್ಚಿಸಲು ಹಸಿರು ನಿಶಾನೆ ದೊರಕಿದೆ.
ಈ ಹಿನ್ನೆಲೆಯಲ್ಲಿ ಆನ್ ಲೈನ್ ಟಿಕೆಟ್ ಮಾರಾಟವನ್ನೂ ಆರಂಭಿಸಲಾಗಿದೆ.
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದ ಕಾರಣ ಮಹಾರಾಷ್ಟ್ರ ಸರ್ಕಾರ ಕೆಲವು ನಿರ್ಬಂಧ ಏರಿತ್ತು.
ಇದೀಗ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೋವಿಡ್ ನಿಯಮಗಳನ್ನು ಹಿಂಪಡೆದಿದೆ.
ಈ ಹಿನ್ನೆಲೆಯಲ್ಲಿ ಐಪಿಎಲ್ ಪಂದ್ಯಗಳನ್ನು ಪ್ರತ್ಯಕ್ಷವಾಗಿ ವೀಕ್ಷಿಸುವ ಪ್ರೇಕ್ಷಕರ ಸಂಖ್ಯೆಯನ್ನು ಹೆಚ್ಚಿಸಲು ಬಿಸಿಸಿಐ ನಿರ್ಧರಿಸಿದೆ.
ಒಟ್ಟಿನಲ್ಲಿ ಬಿಸಿಸಿಐನ ಈ ನಿರ್ಧಾರದಿಂದ ಮುಂದಿರುವ ಐಪಿಎಲ್ ಪಂದ್ಯಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿರುತ್ತವೆ.
ಮುಂಬೈನ ಬ್ರಬೋರ್ನ್, ವಾಂಖೆಡೆ, ಡಿವೈ ಪಾಟೀಲ್ ಮತ್ತು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ (ಎಂಸಿಎ) ಸ್ಟೇಡಿಯಂಗಳಲ್ಲಿ ಐಪಿಎಲ್ ಲೀಗ್ ಪಂದ್ಯಗಳು ನಡೆಯುತ್ತಿವೆ. ipl-2022-crowd-capacity-increased-50-percent









