IPL 2022 | ಸೋಲಿನ ಬೆನ್ನಲ್ಲೆ ಪಂತ್ ಗೆ ಭಾರಿ ಶಾಕ್..!!
ಸತತ ಸೋಲಿನಿಂದ ಕಂಗೆಟ್ಟಿದ್ದ ಡೆಲ್ಲಿ ಕ್ಯಾಪಿಟಲ್ಸ್ ಗೆ ಮತ್ತೊಂದು ಭಾರಿ ಆಘಾತ ಎದುರಾಗಿದೆ.
ನಿಧಾನಗತಿಯ ಬೌಲಿಂಗ್ ನಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಅವರಿಗೆ ಐಪಿಎಲ್ ಆಯೋಜಕರು ದಂಡ ವಿಧಿಸಿದ್ದಾರೆ.
ನಿಗದಿತ ಸಮಯದೊಳಗೆ ಬೌಲಿಂಗ್ ಕೋಟಾವನ್ನು ಪೂರ್ಣಗೊಳಿಸದ ಕಾರಣ ಪಂತ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಿದ್ದಾರೆ. ಈ ಕುರಿತು ಅಧಿಕೃತ ಹೇಳಿಕೆ ಹೊರಬಿದ್ದಿದೆ.
ಡೆಲ್ಲಿ ತಂಡ ಗುರುವಾರ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಿತ್ತು.
ಮುಂಬೈನ ಡಾ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ ನಿಗದಿತ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಗುರಿ ಬೆನ್ನತ್ತಿದ ಲಕ್ನೋ 19.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ipl-2022-delhi-captain-rishabh-pant-fined-inr-12-lakh