IPL 2022- 1st Week : ನಿರೀಕ್ಷೆಗಳನ್ನ ಹುಸಿಗೊಳಿಸಿದ ಬ್ಯಾಟರ್ ಗಳು ಇವರೇ..!
ಇಂಡಿಯನ್ ಪ್ರಿಮಿಯರ್ ಲೀಗ್ ಆರಂಭವಾಗಿ ಇಂದಿಗೆ ಒಂದು ವಾರ ಕಳೆದಿದೆ. ಈ ವಾರದಲ್ಲಿ ಎಂಟು ಪಂದ್ಯಗಳು ನಡೆದಿವೆ. ಈ ಎಂಟು ಪಂದ್ಯಗಳ ಪೈಕಿ ಸಾಕಷ್ಟು ಪಂದ್ಯಗಳು ಕೊನೆಯ ಓವರ್ ನಲ್ಲಿ ಅಂತ್ಯವಾಗಿದ್ದು, ಮನರಂಜನೆಗೆ ಯಾವುದೇ ಕೊರತೆ ಇಲ್ಲ. ಈ ಬಾರಿಯ ಐಪಿಎಲ್ ನಲ್ಲಿ ಕೆಲ ಆಟಗಾರರ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದ್ರೆ ಆ ಆಟಗಾರರು ಎಲ್ಲರ ಚಿತ್ತ ಕದಿಯುವಲ್ಲಿ ವಿಫಲರಾಗಿದ್ದಾರೆ.
ರುತುರಾಜ್ ಗಾಯಕ್ವಾಡ್
IPL-2021 ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಟಗಾರ 635 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಜೊತೆಗೆ ದೇಶಿಯ ಟೂರ್ನಿಗಳಲ್ಲಿ ಮಿಂಚು ಹರಿಸಿದ್ದರು. ಹೀಗಾಗಿ ರುತುರಾಜ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದ್ರೆ ಗಾಯಕ್ವಾಡ್ ಆ ನಿರೀಕ್ಷೆಗಳನ್ನ ಹುಸಿಗೊಳಿಸಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಡಕ್ ಆಗಿದ್ದ ರುತುರಾಜ್, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ ಒಂದು ರನ್ ಗಳಿಸಿದ್ದಾರೆ.
ವೆಂಕಟೇಶ ಅಯ್ಯರ್
ಮಧ್ಯಪ್ರದೇಶದ ಬ್ಯಾಟ್ಸ್ಮನ್ ಕಳೆದ ಋತುವಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಅತ್ಯದ್ಭುತ ಪ್ರದರ್ಶನ ನೀಡಿದ್ದರು. ಜೊತೆಗೆ ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದರು. ಹೀಗಾಗಿ KKR ಅವರನ್ನು 8 ಕೋಟಿ ರೂ.ಗೆ ರಿಟೈನ್ಡ್ ಮಾಡಿಕೊಂಡಿತ್ತು. ಆದ್ರೆ ಈ ಬಾರಿಯ ಐಪಿಎಲ್ ನಲ್ಲಿ ವೆಂಕಟೇಶ್ ಮಕಾಡೆ ಮಲಗಿದ್ದಾರೆ. ಸಿಎಸ್ಕೆ ವಿರುದ್ಧದ ಮೊದಲ ಪಂದ್ಯದಲ್ಲಿ 16 ರನ್, RCB ವಿರುದ್ಧ 10 ಮತ್ತು ಪಂಜಾಬ್ ವಿರುದ್ಧ ಕೇವಲ 3 ರನ್ ಗಳಿಸಿದ್ದಾರೆ.
ಅನುಜ್ ರಾವತ್
ಆರ್ಸಿಬಿಯ ಆರಂಭಿಕ ಆಟಗಾರ ಅನುಜ್ ರಾವತ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದ್ರೆ ಅವರು ಆಡಿದ ಎರಡೂ ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ 21 ರನ್ ಗಳಿಸಿ ಪೆವಿಲಿಯನ್ ಸೇರಿದರು. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಒಂದೇ ರನ್ ಗಳಿಸಿ ಔಟಾದರು.
ನಿಕೋಲಸ್ ಪೂರನ್
ಸನ್ ರೈಸರ್ಸ್ ಹೈದರಾಬಾದ್ ತಂಡ ನಿಕೋಲಸ್ ಪೂರನ್ ಅವರನ್ನು ದೊಡ್ಡ ನಿರೀಕ್ಷೆಯೊಂದಿಗೆ ಮೆಗಾ ಹರಾಜಿನಲ್ಲಿ ಖರೀದಿಸಿತ್ತು. ಇತ್ತೀಚಿನ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಮಿಂಚುತ್ತಿರುವ ಪೂರನ್, ಈ ಬಾರಿಯ ಐಪಿಎಲ್ ನಲ್ಲಿ ರನ್ ಸುನಾಮಿ ಎಬ್ಬಿಸ್ತಾರೆ ಎಂದು ಅಂದುಕೊಳ್ಳಲಾಗಿತ್ತು. ಆದ್ರೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಟ್ರೆಂಟ್ ಬೌಲ್ಟ್ ಎಸೆತದಲ್ಲಿ ಡಕ್ ಆಗಿದ್ದ ಪೂರನ್ ಕಳಪೆ ಪ್ರದರ್ಶನ ನೀಡಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಲಿಯಾಮ್ ಲಿವಿಂಗ್ಸ್ಟೋನ್
ಮೆಗಾ ಹರಾಜು-2022 ರ ಭಾಗವಾಗಿ ಪಂಜಾಬ್ ಕಿಂಗ್ಸ್ ಲಿಯಾಮ್ ಲಿವಿಂಗ್ಸ್ಟೋನ್ ಅನ್ನು 11.5 ಕೋಟಿ ರೂ.ಗೆ ಖರೀದಿಸಿದೆ. ಅವರು ಇದುವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಒಟ್ಟು 38 ರನ್ ಗಳಿಸಿದ್ದಾರೆ. ipl-2022-first-week-season flop-batters