ಡೆಲ್ಲಿ ತಂಡಕ್ಕೆ ಗುಡ್ ನ್ಯೂಸ್… ಯಾರ್ಕರ್ ಕಿಂಗ್ ಆಗಮನ
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ.
ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿರುವ ದಕ್ಷಿಣ ಆಫ್ರಿಕಾದ ಸ್ಟಾರ್ ವೇಗಿ ಅನ್ರಿಚ್ ನಾರ್ಟ್ಜೆ ಲಕ್ನೋ ವಿರುದ್ಧದ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ.
ಕಳೆದ ಐದು ತಿಂಗಳಿಂದ ಗಾಯದ ಸಮಸ್ಯೆಯಿಂದ ಹೊರಗುಳಿದಿರುವ ನಾರ್ಟ್ಜೆ ಸಂಪೂರ್ಣ ಫಿಟ್ನೆಸ್ ಸಾಧಿಸಿದ್ದಾರೆ.
ಈ ವರ್ಷದ ಐಪಿಎಲ್ ಆರಂಭದಿಂದಲೂ ತಂಡದಲ್ಲಿದ್ದ ಅನ್ರಿಚ್ ಮೊದಲೆರಡು ಪಂದ್ಯಗಳಿಂದ ದೂರ ಇದ್ದರು.
ಮತ್ತೊಂದೆಡೆ, ಪಾಕಿಸ್ತಾನ ಪ್ರವಾಸದಿಂದಾಗಿ ಐಪಿಎಲ್-2022 ರ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದ ಆಸೀಸ್ ಸ್ಟಾರ್ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಕೂಡ ಈ ಪಂದ್ಯದೊಂದಿಗೆ ತಂಡಕ್ಕೆ ಮರಳಲಿದ್ದಾರೆ.
ಇದನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಶೇನ್ ವ್ಯಾಟ್ಸನ್ ಖಚಿತಪಡಿಸಿದ್ದಾರೆ.
ಡೇವಿಡ್ ವಾರ್ನರ್ ತನ್ನ ಕ್ವಾರಂಟೈನ್ ಅನ್ನು ಪೂರ್ಣಗೊಳಿಸಿದ್ದಾರೆ. ಹಾಗಾಗಿ ಅವರು ನಮ್ಮ ಮುಂದಿನ ಪಂದ್ಯಕ್ಕೆ ಖಂಡಿತ ಲಭ್ಯರಾಗುತ್ತಾರೆ.
ಇದು ನಿಜಕ್ಕೂ ನಮಗೆ ಒಳ್ಳೆಯ ಸುದ್ದಿ. ಅದೇ ರೀತಿ ಅನ್ರಿಚ್ ನಾರ್ಟ್ಜೆ ಕೂಡ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಹೀಗಾಗಿ ಈ ಪಂದ್ಯಕ್ಕೂ ಲಭ್ಯರಾಗಲಿದ್ದಾರೆ ಎಂದು ಶೇನ್ ವ್ಯಾಟ್ಸನ್ ಹೇಳಿದ್ದಾರೆ. ipl-2022 great-news-delhi-capitals