IPL 2022 | ಆಗ ಕೆಕೆಆರ್ ಈಗ ಗುಜರಾತ್ ಟೈಟಾನ್ಸ್…
ಕ್ಯಾಶ್ ರಿಚ್ ಲೀಗ್ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಗುಜರಾತ್ ಟೈಟಾನ್ಸ್ ತಂಡ ಚೊಚ್ಚಲ ಟೂರ್ನಿಯಲ್ಲಿಯೇ ಅದ್ಭುತ ಪ್ರದರ್ಶನ ನೀಡಿದೆ.
ಲೀಗ್ ಹಂತದಲ್ಲಿ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಇದೀಗ ಫೈನಲ್ ತಲುಪಿದೆ.
ಕ್ವಾಲಿಫೇಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಗುಜರಾತ್ ಟೈಟಾನ್ಸ್ ತಂಡ ಸೋಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿತ್ತು.
ಈ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ತಂಡ, 19.3 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.
ಈ ಹಿನ್ನೆಲೆಯಲ್ಲಿ ಗುಜರಾತ್ ಟೈಟಾನ್ಸ್ ತಂಡ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಅಪರೂಪದ ಸಾಧನೆ ಮಾಡಿದೆ.
ಪ್ಲೇ ಆಫ್ಸ್ / ನಾಕೌಟ್ ಪಂದ್ಯಗಳಲ್ಲಿ ಭಾರಿ ಟಾರ್ಗೆಟ್ ಮುಟ್ಟಿದ ಮೂರನೇ ತಂಡ ಎಂಬ ಸಾಧನೆ ಮಾಡಿದೆ.
2012ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೇಲೆ 191 ರನ್, 2014ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 200 ರನ್ ಗಳ ಟಾರ್ಗೆಟ್ ಅನ್ನು ಚೇಸ್ ಮಾಡಿತ್ತು.
ಐಪಿಎಲ್ ಪ್ಲೇ-ಆಫ್ ಅಥವಾ ನಾಕೌಟ್ ಹಂತಗಳಲ್ಲಿ ಬೃಹತ್ ಮೊತ್ತ ಮುಟ್ಟಿದ ತಂಡಗಳು
ಕೋಲ್ಕತ್ತಾ ನೈಟ್ ರೈಡರ್ಸ್ – 2012 – ಚೆನ್ನೈ ವಿರುದ್ಧ, ಟಾರ್ಗೆಟ್ – 191
ಕೋಲ್ಕತ್ತಾ ನೈಟ್ ರೈಡರ್ಸ್- 2014- ಪಂಜಾಬ್ ಕಿಂಗ್ಸ್ ವಿರುದ್ಧ, ಟಾರ್ಗೆಟ್-200
ಗುಜರಾತ್ ಟೈಟಾನ್ಸ್ – 2022 – ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುರಿ – 189
ಕೆಕೆಆರ್ ಎರಡೂ ಪಂದ್ಯಗಳನ್ನು ಗೆದ್ದು ಆಯಾ ಋತುವಿನಲ್ಲಿ ಪ್ರಶಸ್ತಿ ಗೆದ್ದುಕೊಂಡಿತ್ತು.
ಅದೇ ರೀತಿ ಗುಜರಾತ್ ಟೈಟಾನ್ಸ್ ತಂಡ ಈ ಬಾರಿ ಚಾಂಪಿಯನ್ಸ್ ಆಗುತ್ತಾ ಎಂಬೋದನ್ನ ನೋಡಬೇಕಾಗಿದೆ. ipl-2022-highest-target-chased-playoffs-or-knockouts-gt-record