KKR v CSK : ಮೊದಲ ಪಂದ್ಯದಲ್ಲಿ ಸಿಎಸ್ ಕೆ ಸೋಲಿಗೆ ಕಾರಣವೇನು..?
ಮೊದಲು ಸಿಎಸ್ ಕೆ ಬ್ಯಾಟರ್ ಗಳ ಪರದಾಟ… ನಂತರ ಧೋನಿ ಧಮಾಖ.. ನಿರಾಯಾಸವಾಗಿ ಗೆದ್ದ ಕೆಕೆಆರ್ ಇದು ಇಂಡಿಯಲ್ ಪ್ರಿಮಿಯರ್ ಲೀಗ್ ನ ಮೊದಲ ಪಂದ್ಯದ ಹೈಲೇಟ್ಸ್..
15 ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯವಾಗಿ ಸೋಲುಂಡಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸುಲಭ ಜಯ ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಆರಂಭದಿಂದಲೇ ವಿಕೆಟ್ ಗಳನ್ನ ಕಳೆದುಕೊಳ್ಳುತ್ತಾ ಸಾಗಿತು.
ರಾಬಿನ್ ಉತ್ತಪ್ಪ, ರವೀಂದ್ರ ಜಡೇಜಾ, ಎಂ.ಎಸ್.ಧೋನಿ ಬಿಟ್ಟರೇ ಬೇರೆ ಯಾರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ.
ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್(0) ಹಾಗೂ ಡ್ವೇನ್ ಕಾನ್ವೇ(3) ಗೆ ಪೆವಿಲಿಯನ್ ಸೇರಿಕೊಂಡರು.
ಬಳಿಕ ಬಂದ ರಾಬಿನ್ ಉತ್ತಪ್ಪ, ಬೌಂಡರಿ, ಸಿಕ್ಸ್ ಸಿಡಿಸಿ ಅಬ್ಬರಿಸುವ ಸೂಚನೆ ನೀಡಿದ್ರೂ 28 ರನ್ ಗಳಿಗೆ ಆಟ ಮುಗಿಸಿದ್ರು. ಇವರ ಬೆನ್ನಲ್ಲೇ ಅಂಬಾಟಿ ರಾಯುಡು 15 ರನ್ ಸಿಡಿಸಿ ಪೆವಿಲಿಯನ್ ಸೇರಿಕೊಂಡರು.
61 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಚೆನ್ನೈ ತಂಡಕ್ಕೆ ರವೀಂದ್ರ ಜಡೇಜಾ ಮತ್ತು ಧೋನಿ ಆಸರೆಯಾದರು. ಮುಖ್ಯವಾಗಿ ಎಂ.ಎಸ್.ಧೋನಿ ಅರ್ಧಶತಕ ಸಿಡಿಸಿ ಮಿಂಚಿದರು.
ಹಳೆಯ ಖದರ್ನಲ್ಲಿ ಬ್ಯಾಟ್ ಬೀಸಿದ ಧೋನಿ ಅಜೇಯ 50 ರನ್ (38 ಎಸೆತ, 7 ಬೌಂಡರಿ, 1 ಸಿಕ್ಸ್) ಸಿಡಿಸಿದರು. ಇವರಿಗೆ ಜಡೇಜಾ ಅಜೇಯ 26 ರನ್ ಉತ್ತಮ ಸಾಥ್ ನೀಡಿದರು.
ಅಂತಿಮವಾಗಿ ಚೆನ್ನೈ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿತು.
132 ರನ್ಗಳ ಟಾರ್ಗೆಟ್ ಬೆನ್ನತ್ತಿದ ಕೆಕೆಆರ್ 18.4 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 133 ರನ್ ಸಿಡಿಸಿ ಗೆದ್ದು ಬೀಗಿತು. ಕೆಕೆಆರ್ ಪರ ಆರಂಭಿಕರಾದ ವೆಂಕಟೇಶ್ ಅಯ್ಯರ್ 16 ರನ್ (16 ಎಸೆತ, 2 ಬೌಂಡರಿ) ಸಿಡಿಸಿ ಔಟ್ ಆದರು.
ಬಳಿಕ ನಿತೇಶ್ ರಾಣಾ 21 ರನ್ (17 ಎಸೆತ, 2 ಬೌಂಡರಿ, 1 ಸಿಕ್ಸ್) ಬಾರಿಸಿ ತಂಡಕ್ಕೆ ನೆರವಾದರು. ಇನ್ನೊಂದೆಡೆ ಅರ್ಧಶತಕದ ಹೊಸ್ತಿಲಲ್ಲಿದ್ದ ರಹಾನೆ 44 ರನ್ (34 ಎಸೆತ, 6 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆದರು.
ಅಂತಿಮವಾಗಿ ಸ್ಯಾಮ್ ಬಿಲ್ಲಿಂಗ್ಸ್ 25 ರನ್ (21 ಎಸೆತ, 1 ಸಿಕ್ಸ್, 1 ಬೌಂಡರಿ) ಮತ್ತು ನಾಯಕ ಶ್ರೇಯಸ್ ಅಯ್ಯರ್ ಅಜೇಯ 20 ರನ್ (20 ಎಸೆತ, 1 ಬೌಂಡರಿ) ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.