KKR vs SRH Match | ನೈಟ್ ರೈಡರ್ಸ್ ವಿರುದ್ಧ ರೈಸ್ ಆಗುತ್ತಾ ಹೈದರಾಬಾದ್
ಇಂಡಿಯನ್ ಪ್ರಿಮಿಯರ್ ಲೀಗ್ ನ 61 ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 15ನೇ ಸೀಸನ್ ನಲ್ಲಿ ಈವರೆಗೂ 12 ಪಂದ್ಯಗಳನ್ನಾಡಿದೆ. ಈ ಪೈಕಿ ಐದು ಪಂದ್ಯಗಳಲ್ಲಿ ಗೆದ್ದು ಏಳು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದರೊಂದಿಗೆ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.
ಇತ್ತ ಕೇನ್ ವಿಲಿಯಂ ಸನ್ ನಾಯಕತ್ವ ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಸೀಸನ್ ನಲ್ಲಿ 11 ಪಂದ್ಯಗಳನ್ನಾಡಿದೆ. ಇದರಲ್ಲಿ ಐದು ಪಂದ್ಯಗಳಲ್ಲಿ ಗೆದ್ದು, ಆರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ 10 ಅಂಗಳೊಂದಿಗೆ ಆರನೇ ಸ್ಥಾನದಲ್ಲಿದೆ.
ಈಗಾಗಕೇ ಪ್ಲೇ ಆಫ್ಸ್ ರೇಸ್ ನಿಂದ ದೂರ ಇರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಕೊಲ್ಕತ್ತಾ ತಂಡ 52 ರನ್ ಗಳಿಂದ ಜಯ ಸಾಧಿಸಿದೆ. ಕೆಕೆಆರ್ ಪರ ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್ ತಲಾ 43 ರನ್ ಗಳಿಸಿದ್ದರು. ಇದೇ ಪ್ರದರ್ಶನವನ್ನು ಮುಂದುವರೆಸಲು ಪ್ಲಾನ್ ಮಾಡಿಕೊಂಡಿದೆ.
ಮತ್ತೊಂದು ಕಡೆ ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಿತ್ತು. ಆದ್ರೆ ಆರ್ ಸಿಬಿ ವಿರುದ್ದ ಎಸ್ ಆರ್ ಹೆಚ್ 67 ರನ್ ಗಳಿಂದ ಸೋಲು ಕಂಡಿದೆ. ಈ ಪಂದ್ಯದಲ್ಲಿ ರಾಹುಲ್ ತ್ರಿಪಾಟಿ 58 ರನ್ ಗಳಿಸಿದ್ದರು. ಪ್ಲೇ ಆಫ್ಸ್ ದೃಷ್ಟಿಯಿಂದ ಈ ಪಂದ್ಯದಲ್ಲಿ ಎಸ್ ಆರ್ ಹೆಚ್ ಗೆಲ್ಲೋದು ಅನಿವಾರ್ಯವಾಗಿದೆ.
ಇನ್ನು ಈ ಉಭಯ ತಂಡಗಳು ಈ ಸೀಸನ್ ನಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಕಳೆದ ಬಾರಿ ಎದುರುಬದುರಾದಾಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಏಳು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಗೆದ್ದು ಸೇಡು ತೀರಿಸಿಕೊಳ್ಳುತ್ತಾ..? ಅಥವಾ ಕೆಕೆಆರ್ ಗೆದ್ದು ಪ್ಲೇ ಆಫ್ಸ್ ಅದೃಷ್ಠದ ರೇಸ್ ನಲ್ಲಿ ನಿಲ್ಲುತ್ತಾ ಕಾದು ನೋಡಬೇಕಾಗಿದೆ.
ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ
ಶ್ರೇಯಸ್ ಅಯ್ಯರ್ ನಾಯಕತ್ವ ಕೆಕೆಆರ್ ತಂಡ ಈಗ ಸೆಟ್ ಆಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಆಟಗಾರರ ಮಿಂಚುತ್ತಿದ್ದಾರೆ. ಆರಂಭಿಕರ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಆಟಗಾರರು ಜವಾಬ್ದಾರಿಯುತ ಪ್ರದರ್ಶನ ನೀಡುತ್ತಿರೋದು ತಂಡದ ಗೆಲುವಿಗೆ ಕಾರಣವಾಗಿದೆ.
ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿಚಾರಕ್ಕೆ ಬಂದ್ರೆ ಬೌಲಿಂಗ್ ನಲ್ಲಿ ಅನಾನುಭವಿ ಯುವಕರು ದಾರಿ ತಪ್ಪುತ್ತಿದ್ದಾರೆ. ಭುವನೇಶ್ವರ್ ಕುಮಾರ್ ರನ್ ಗಳಿಗೆ ಕಡಿವಾಣ ಹಾಕುತ್ತಾ ವಿಕೆಟ್ ಬೇಟೆಯಾಡುತ್ತಿದ್ದಾರೆ. ಆದ್ರೆ ಇನ್ನುಳಿದ ಬೌಲರ್ ಗಳು ಸಾಥ್ ನೀಡುತ್ತಿಲ್ಲ. ಇತ್ತ ಬ್ಯಾಟಿಂಗ್ ನಲ್ಲಿ ಹೈದರಾಬಾದ್ ಡಿಸೇಂಟ್ ಆಗಿದೆ. IPL 2022 kkr-vs-srh-61 match-Prediction