IPL ನಿಬಂಧನೆ ಉಲ್ಲಂಘನೆ.. KLRಗೆ ಭಾರಿ ದಂಡ
ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಗೆ ಅನಿರೀಕ್ಷಿತ ಆಘಾತ ಎದುರಾಗಿದೆ.
ಆರ್‌ಸಿಬಿ ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕೆಎಲ್ ರಾಹುಲ್ ಪಂದ್ಯ ಶುಲ್ಕದಲ್ಲಿ ಶೇ.20ರಷ್ಟು ಕಡಿತಗೊಳಿಸುವುದಾಗಿ ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ.
ಡಿ.ವೈ.ಪಾಟೀಲ್ ವೇದಿಕೆಯಾಗಿ ನಡೆದ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ನಿಯಮ ಉಲ್ಲಂಘಿಸಿದ್ದಾರೆ ಎಂದು ವರದಿಯಾಗಿದೆ.
ಕೆಎಲ್ ರಾಹುಲ್ ಅವರು ನೀತಿ ಸಂಹಿತೆಯ ಅಡಿಯಲ್ಲಿ ಲೆವೆಲ್-1 ನಿಬಂಧನೆಯನ್ನು ಉಲ್ಲಂಘಿಸಿರುವುದು ಕಂಡುಬಂದಿದೆ.
ರಾಹುಲ್ ಕೂಡ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ನಿಯಮಾನುಸಾರ ಅವರ ಪಂದ್ಯ ಶುಲ್ಕದಲ್ಲಿ ಶೇ.20ರಷ್ಟು ಕಡಿತಗೊಳಿಸುತ್ತಿದ್ದೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದಕ್ಕಾಗಿ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 18 ರನ್ ಗಳಿಂದ ಸೋಲು ಅನುಭವಿಸಿದೆ.









