IPL 2022 Mega Auction | ಹರಾಜಿಗೆ ಬಂದ ಶ್ರೀಶಾಂತ್.. ಬೆಲೆ ಎಷ್ಟು ಗೊತ್ತಾ..?
IPL-2022 ಮೆಗಾ ಹರಾಜಿನ ಸಮಯ ಸನ್ನಿಹಿತವಾಗಿದೆ. ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ipl-2022-mega-auction
ಈಗಾಗಲೇ 1214 ಆಟಗಾರರು ಮೆಗಾ ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.
ಅದೇ ರೀತಿ ಭಾರತದ ಮಾಜಿ ವೇಗಿ ಶ್ರೀಶಾಂತ್ ಮತ್ತೊಮ್ಮೆ ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗಿಳಿಯಲಿದ್ದಾರೆ. ಅವರ ಮೂಲ ಬೆಲೆ 50 ಲಕ್ಷ.
ಕಳೆದ ವರ್ಷದ 75 ಲಕ್ಷ ಮುಖ ಬೆಲೆ ಹೊಂದಿದ್ದರೂ, ಯಾವುದೇ ಫ್ರಾಂಚೈಸಿ ಅವರನ್ನು ಖರೀದಿಸಲು ಆಸಕ್ತಿ ತೋರಲಿಲ್ಲ. ಶ್ರೀಶಾಂತ್ 2013ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕೊನೆಯ ಬಾರಿ ಆಡಿದ್ದರು.
ಬಳಿಕ ಸ್ಪಾಟ್ ಫಿಕ್ಸಿಂಗ್ ಆರೋಪದ ಹಿನ್ನೆಲೆಯಲ್ಲಿ ಬಿಸಿಸಿಐ ಅವರ ಮೇಲೆ ಆಜೀವ ನಿಷೇಧ ಹೇರಿತ್ತು. ಆದರೆ, ಶ್ರೀಶಾಂತ್ ನಿಷೇಧವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಇದಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟ್ ಬಿಸಿಸಿಐಗೆ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸುವಂತೆ ಆದೇಶಿಸಿತ್ತು.
ಬಿಸಿಸಿಐ ಅವರ ಮೇಲಿನ ನಿಷೇಧವನ್ನು ಏಳು ವರ್ಷಕ್ಕೆ ಇಳಿಸಿತ್ತು. ಸೆಪ್ಟೆಂಬರ್ 13, 2020 ರಂದು ನಿಷೇಧವನ್ನು ತೆಗೆದುಹಾಕಲಾಗಿದೆ. ಕಳೆದ ವರ್ಷ ಸೈಯದ್ ಮುಸ್ತಾಕ್ ಅಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಕೇರಳ ಪರ ಶ್ರೀಶಾಂತ್ ಆಡಿದ್ದರು.