IPL 2022 | ಮುಂಬೈ ಮಾಡಿದ ಅತಿ ದೊಡ್ಡ ತಪ್ಪು..!!
15 ನೇ ಆವೃತ್ತಿಯ ಇಂಡಿಯಲ್ ಪ್ರಿಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಸೀಬು ಸರಿಯಿಲ್ಲ ಅಂತಾ ಅನಿಸುತ್ತೆ. ಯಾಕಂದರೇ ತಂಡದಲ್ಲಿ ಮ್ಯಾಚ್ ವಿನ್ನರ್ ಗಳ ದಂಡೇ ಇದ್ದರೂ ಈವರೆಗೂ ಒಂದೇ ಒಂದು ಪಂದ್ಯವನ್ನು ಕೂಡ ಗೆದ್ದಿಲ್ಲ.
ಈ ಆವೃತ್ತಿಯಲ್ಲಿ ಆಡಿರುವ ಐದು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಬಳಗ ಒಂದು ಪಂದ್ಯದಲ್ಲಿ ಮಾತ್ರ ಗೆಲುವಿನ ಅಂಚಿನವರೆಗೂ ಬಂದಿದೆ. ಆದ್ರೆ ಇನ್ನುಳಿದ ಪಂದ್ಯಗಳಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.
ಹೀಗಾಗಿ ಸಮಾನ್ಯವಾಗಿಯೇ ತಂಡದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಗಳು ಶುರುವಾಗಿವೆ. ಮುಂಬೈ ಸೋಲಿಗೆ ಕಾರಣವೇನು ಅಂತಾ ಚರ್ಚೆಗಳು ನಡೆಯುತ್ತಿವೆ.
ಈ ನಡುವೆ ಮುಂಬೈ ಇಂಡಿಯನ್ಸ್ ತಂಡದ ಸೋಲಿಗೆ ಟೀಂ ಮ್ಯಾನೇಜ್ ಮೆಂಟ್ ಕಾರಣ ಎಂದು ನೆಟ್ಟಿಗರು ಆರೋಪಿಸುತ್ತಿದ್ದಾರೆ.
ಸದ್ಯ ಗುಜರಾತ್ ಟೈಟಾನ್ಸ್ ನಾಯಕರಾಗಿ ಅತ್ಯದ್ಭುತ ಪ್ರದರ್ಶನ ನೀಡುತ್ತಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯವನ್ನು ಕೈ ಬಿಟ್ಟಿದ್ದು, ಮುಂಬೈನ ಈ ಸ್ಥಿತಿಗೆ ಕಾರಣ ಎಂದು ನೆಟ್ಟಿಗರು ಅಭಿಪ್ರಾಯಪಡುತ್ತಿದ್ದಾರೆ.
ಮೆಗಾ ಹರಾಜಿಗೂ ಮುನ್ನಾ ಮುಂಬೈ ಇಂಡಿಯನ್ಸ್ ತಂಡ ಹಾರ್ದಿಕ್ ಪಾಂಡ್ಯವನ್ನು ರಿಟೈನ್ ಮಾಡಿಕೊಂಡಿರಲಿಲ್ಲ. ಹೀಗಾಗಿ ಪಾಂಡ್ಯ ಗುಜರಾತ್ ಪಾಲಾದ್ರು.
ಜೊತೆಗೆ ಟೈಟಾನ್ಸ್ ನಾಯಕರಾದರು. ಸದ್ಯ ಟೈಟಾನ್ಸ್ ಪರ ಅಬ್ಬರಿಸುತ್ತಿರುವ ಹಾರ್ದಿಕ್ ಪಾಂಡ್ಯ, ಗುರುವಾರ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 87 ರನ್ ಗಳಿಸಿ ಗುಜರಾತ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಬೌಲಿಂಗ್ ನಲ್ಲೂ ಮಹತ್ವದ ವಿಕೆಟ್ ಪಡೆದರು. ಈ ಋತುವಿನಲ್ಲಿ ಇದುವರೆಗೆ ಐದು ಪಂದ್ಯಗಳನ್ನು ಆಡಿರುವ ಹಾರ್ದಿಕ್ 228 ರನ್ ಗಳಿಸಿ, ಮೂರು ವಿಕೆಟ್ ಪಡೆದಿದ್ದಾರೆ.
ಹೀಗಾಗಿ ಹಾರ್ದಿಕ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಶಂಸೆಗಳ ಸುರಿಮಳೆಯಾಗುತ್ತಿದೆ. ಕೆಲವರು “ಹಾರ್ದಿಕ್ ಅವರನ್ನು ಬಿಟ್ಟು ಮುಂಬೈ ಇಂಡಿಯನ್ಸ್ ದೊಡ್ಡ ತಪ್ಪು ಮಾಡಿದೆ” ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ಒಂದು ವೇಳೆ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಉಳಿಸಿಕೊಂಡಿದ್ದರೇ ರೋಹಿತ್ ಬಳಗಕ್ಕೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅಭಿಪ್ರಾಯಪಡುತ್ತಿದ್ದಾರೆ.
ಇನ್ನು ಸದ್ಯ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡ, 15ನೇ ಆವೃತ್ತಿಯಲ್ಲಿ ಮೊದಲ ಗೆಲುವಿಗಾಗಿ ಹಂಬಲಿಸುತ್ತಿದೆ.
IPL-2022 ಮೆಗಾ ಹರಾಜಿನ ಮೊದಲು ಮುಂಬೈ ಇಂಡಿಯನ್ಸ್ ಹಾರ್ದಿಕ್ ಅವರನ್ನು ಕೈ ಬಿಟ್ಟ ಮುಂಬೈ ಫ್ರಾಂಚೈಸಿ, ನಾಯಕ ರೋಹಿತ್ ಶರ್ಮಾ, ಹಿಟ್ಟರ್ ಕೀರನ್ ಪೊಲಾರ್ಡ್, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನ ಉಳಿಸಿಕೊಂಡಿತ್ತು. ipl-2022-mumbai indians biggest mistake









