IPL 2022 : ವೈರಲ್ ಆಗುತ್ತಿದೆ ಅರ್ಷದೀಪ್ ಸಿಂಗ್ ಸೆಲೆಬ್ರೆಷನ್
ಇಂಡಿಯನ್ ಪ್ರಿಮಿಯರ್ ಲೀಗ್ ನ 38 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಅಮೋಘ ಗೆಲುವು ಸಾಧಿಸಿದೆ.
ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಳ್ತು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು.
ಈ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಗಳಿಸಲಷ್ಟೆ ಶಕ್ತವಾಯ್ತು.
ಆ ಮೂಲಕ 15 ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ತಂಡ ಆರನೇ ಸೋಲು ಅನುಭವಿಸಿದೆ.
ಇತ್ತ ನಾಲ್ಕನೇ ಗೆಲುವು ಸಾಧಿಸಿದ ಪಂಜಾಬ್ ತಂಡ, 8 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್ ನಲ್ಲಿ ಆರನೇ ಸ್ಥಾನಕ್ಕೇರಿದೆ.
ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಮಿಚೆಲ್ ಸ್ಯಾಂಟ್ನರ್ ವಿಕೆಟ್ ತೆಗೆದ ಬಳಿಕ ಪಂಜಾಬ್ ಕಿಂಗ್ಸ್ ಪೇಸರ್ ಅರ್ಷದೀಪ್ ಸಿಂಗ್ ಸೆಲೆಬ್ರೆಷನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಚೆನ್ನೈ ಇನ್ನಿಂಗ್ಸ್ ನ ಆರನೇ ಓವರ್ ನ ಮೂರನೇ ಎಸೆತದಲ್ಲಿ ಅರ್ಷದೀಪ್ ಸಿಂಗ್, ಸ್ಯಾಂಟ್ನರ್ ಅವರನ್ನ ಕ್ಲೀನ್ ಬೋಲ್ಡ್ ಮಾಡಿದರು.
ಫ್ಲಿಕ್ ಶಾಟ್ ಆಡಬೇಕು ಅಂದುಕೊಂಡಿದ್ದ ಸ್ಯಾಂಟ್ನರ್ ಅವರನ್ನು ಅರ್ಷದೀಪ್ ಬೋಲ್ಡ್ ಮಾಡಿದರು.
ಈ ಹಿನ್ನೆಲೆಯಲ್ಲಿ ರಥ ನಡೆಸುವ ರೀತಿಯಲ್ಲಿ ವಿಭಿನ್ನವಾಗಿ ಅರ್ಷದೀಪ್ ಸೆಲೆಬ್ರೆಟ್ ಮಾಡಿದರು.
ಈ ಪಂದ್ಯದಲ್ಲಿ ನಾಲ್ಕು ಓವರ್ ಬೌಲ್ ಮಾಡಿದ ಅರ್ಷದೀಪ್, 23 ರನ್ ಗಳನ್ನು ಕೊಟ್ಟು ಒಂದು ವಿಕೆಟ್ ಪಡೆದರು.
https://twitter.com/i/status/1518842844357791745