IPL 2022 : ಪೃಥ್ವಿ ಶಾ ಗೆ ಭಾರಿ ದಂಡ
ಐಪಿಎಲ್-2022 ರ ಅಂಗವಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಪೃಥ್ವಿ ಶಾಗೆ ದಂಡ ವಿಧಿಸಲಾಗಿದೆ.
ಪರಿಣಾಮ ಅವರ ಪಂದ್ಯ ಶುಲ್ಕದಲ್ಲಿ ಶೇ.25ರಷ್ಟು ಕಡಿತ ಮಾಡಲಾಗಿದೆ.
ಲೆವೆಲ್-1 ಅಪರಾಧ ಎಸಗಿದ್ದಕ್ಕಾಗಿ ಶಾ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.
“ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ನಡೆಸಿದ್ದಾಗಿ ಶಾ ತಪ್ಪೊಪ್ಪಿಕೊಂಡಿದ್ದಾರೆ.

ಮ್ಯಾಚ್ ರೆಫರಿಯ ಅಂತಿಮ ನಿರ್ಧಾರದ ಪ್ರಕಾರ ಅವರಿಗೆ ದಂಡ ವಿಧಿಸಲಾಗಿದೆ” ಎಂದು ಐಪಿಎಲ್ ಆಯೋಜಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆದರೆ, ಪೃಥ್ವಿ ಶಾ ಐಪಿಎಲ್ ನೀತಿ ಸಂಹಿತೆಯನ್ನು ಎಲ್ಲಿ ಉಲ್ಲಂಘಿಸಿದ್ದಾರೆ ಎಂಬುದನ್ನು ಐಪಿಎಲ್ ಸಂಘಟಕರು ಸ್ಪಷ್ಟಪಡಿಸಿಲ್ಲ.
ಶಾ ಪಂದ್ಯದಲ್ಲಿ ಕೇವಲ 5 ರನ್ ಗಳಿಸಿ ನಿರಾಸೆ ಮೂಡಿಸಿದರು.
ಇನ್ನು ಪಂದ್ಯದ ವಿಚಾರಕ್ಕೆ ಬಂದರೆ.. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 6 ರನ್‌ಗಳ ಜಯ ಸಾಧಿಸಿದೆ.








