IPL 2022 : ರಾಹುಲ್ ತ್ರಿಪಾಠಿಗೆ ಪ್ರಶಂಸೆಗಳ ಸುರಿಮಳೆ
1 min read
IPL 2022 : ರಾಹುಲ್ ತ್ರಿಪಾಠಿಗೆ ಪ್ರಶಂಸೆಗಳ ಸುರಿಮಳೆ
ಸನ್ರೈಸರ್ಸ್ ಹೈದರಾಬಾದ್ ಬ್ಯಾಟ್ಸ್ಮನ್ ರಾಹುಲ್ ತ್ರಿಪಾಠಿ ಐಪಿಎಲ್-2022 ರಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ.
ಶುಕ್ರವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 37 ಎಸೆತಗಳಲ್ಲಿ 71 ರನ್ ಗಳಿಸಿ SRH ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಹೀಗಾಗಿ ಸೋಶಿಯಲ್ ಮಿಡಿಯಾದಲ್ಲಿ ನೆಟ್ಟಿಗರು ರಾಹುಲ್ ತ್ರಿಪಾಠಿ ಬಗ್ಗೆ ಮೆಚ್ಚುಗೆಯ ಸುರಿಮಳೆಗೈಯ್ಯುತ್ತಿದ್ದಾರೆ. ತ್ರಿಪಾಠಿ ಭಾರತ ಪರ ಆಡಲು ಅರ್ಹರು ಎಂಬುದು ಅಭಿಮಾನಿಗಳ ಅಭಿಪ್ರಾಯ.
ರಾಹುಲ್ ತ್ರಿಪಾಠಿ ಅಧ್ಭುತ ಆಟಗಾರ. ಆತನನ್ನು ಟೀಂ ಇಂಡಿಯಾದ ಆಯ್ಕೆ ಸಮಿತಿ ಪರಿಗಣಿಸಬೇಕು ಎಂದು ನೆಟ್ಟಿಗರು ಕಮೆಂಟ್ ಗಳನ್ನು ಮಾಡುತ್ತಿದ್ದಾರೆ.
ಇದುವರೆಗೆ 5 ಪಂದ್ಯಗಳನ್ನಾಡಿರುವ ತ್ರಿಪಾಠಿ 171 ರನ್ ಗಳಿಸಿದ್ದಾರೆ. SRH ಈ ಋತುವಿನಲ್ಲಿ ಹ್ಯಾಟ್ರಿಕ್ ಗೆದ್ದಿದೆ. ಕೆಕೆಆರ್ ವಿರುದ್ಧ ಸನ್ ರೈಸರ್ಸ್ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು.
ಅಂದಹಾಗೆ ಈ ಬಾರಿಯ ಐಪಿಎಲ್ ನಲ್ಲಿ ಸಾಕಷ್ಟು ಯುವ ಪ್ರತಿಭೆಗಳು ಬೆಳಕಿ ಬರುತ್ತಿದ್ದಾರೆ. ಮುಖ್ಯವಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಆಯುಷ್ ಬಡೋನಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.
ಜೊತೆಗೆ ಶಹಬ್ಬಾಶ್ ಅಹ್ಮದ್ ಈ ಬಾರಿಯ ಐಪಿಎಲ್ ನಲ್ಲಿ ಮ್ಯಾಚ್ ವಿನ್ನರ್ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ. ಬೌಲರ್ ಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ನ ಮಲಿಕ್ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ipl-2022-rahul-tripathi-play-india-after-ipl-2022