RCB VS KKR | ಮೂರು ದಾಖಲೆಗಳ ಮೇಲೆ ವಿರಾಟ್ ಕಣ್ಣು..
RCB VS KKR : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 15 ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಇಂದು ತನ್ನ ಎರಡನೇ ಪಂದ್ಯವನ್ನಾಡಲಿವೆ. ಡಿ ವೈ ಪಾಟೀಲ್ ಮೈದಾನದಲ್ಲಿ ಆರ್ ಸಿಬಿ ಕೆಕೆಆರ್ ವಿರುದ್ಧ ಸೆಣಸಾಟ ನಡೆಸಲಿದೆ.
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸುವ ಸಾಧ್ಯತೆಗಳಿವೆ. ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇನ್ನೂ ಮೂರು ಸಿಕ್ಸರ್ ಗಳನ್ನು ಬಾರಿಸಿದ್ರೆ ಐಪಿಎಲ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಐದನೇ ಬ್ಯಾಟರ್ ಆಗಲಿದ್ದಾರೆ.
ವಿರಾಟ್ ಕೊಹ್ಲಿ ಸದ್ಯ 212 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಇನ್ನೂ ಮೂರು ಸಿಕ್ಸರ್‌ಗಳನ್ನು ಬಾರಿಸಿದರೆ, ಮುಂಬೈ ಇಂಡಿಯನ್ಸ್ ಆಲ್‌ರೌಂಡರ್ ಕೀರನ್ ಪೊಲಾರ್ಡ್ ಅವರನ್ನು ಹಿಂದಿಕ್ಕಲಿದ್ದಾರೆ.
ಕೀರನ್ ಪೋಲಾರ್ಡ್ ಐಪಿಎಲ್ ನಲ್ಲಿ ಈವರೆಗೂ 214 ಸಿಕ್ಸರ್ ಗಳನ್ನು ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.
ಇದಲ್ಲದೇ ಈ ಪಂದ್ಯದಲ್ಲಿ ಕೊಹ್ಲಿ ಇನ್ನೂ ಮೂರು ಬೌಂಡರಿ ಬಾರಿಸಿದರೆ ಐಪಿಎಲ್ ನಲ್ಲಿ 550 ಬೌಂಡರಿ ಗಳಿಸಿದ ಕ್ರಿಕೆಟಿಗರ ಕ್ಲಬ್ ಸೇರಲಿದ್ದಾರೆ.
ಈ ಎರಡು ದಾಖಲೆಗಳೊಂದಿಗೆ ಕೊಹ್ಲಿ ಮತ್ತೊಂದು ದಾಖಲೆಗೆ ಸಜ್ಜಾಗಿದ್ದಾರೆ. ಕೊಹ್ಲಿ ಐಪಿಎಲ್‌ನಲ್ಲಿ ಇದುವರೆಗೆ 42 ಅರ್ಧ ಶತಕಗಳನ್ನು ಗಳಿಸಿದ್ದಾರೆ.
ಇದರೊಂದಿಗೆ ಐಪಿಎಲ್ ನಲ್ಲಿ ಅತಿ ಹೆಚ್ಚು ಅರ್ಧಶತಕ ಸಿಡಿಸಿರುವ ಡೇವಿಡ್ ವಾರ್ನರ್ ಮತ್ತು ಶಿಖರ್ ಧವನ್ ದಾಖಲೆಗಳ ಸಮೀಪ ಇದ್ದಾರೆ.
ಇಂಡಿಯಲ್ ಪ್ರಿಮಿಯರ್ ಲೀಗ್ ನಲ್ಲಿ ಡೇವಿಡ್ ವಾರ್ನರ್ ಅತಿ ಹೆಚ್ಚು 49 ಅರ್ಧ ಶತಕಗಳನ್ನು ಸಿಡಿಸಿದ್ದಾರೆ. ಶಿಖರ್ ಧವನ್ 44 ಅರ್ಧಶತಕಗಳನ್ನು ಬಾರಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಜೊತೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟರ್ ಗಳಾದ ಅಜಿಂಕ್ಯಾ ರಹಾನೆ ಮತ್ತು ಶ್ರೇಯಸ್ ಅಯ್ಯರ್ ಕೂಡ ಹಲವು ದಾಖಲೆಗಳನ್ನು ನಿರ್ಮಿಸಲಿದ್ದಾರೆ.
ಐಪಿಎಲ್‌ನಲ್ಲಿ 3985 ರನ್ ಗಳಿಸಿರುವ ರಹಾನೆ, ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಇನ್ನೂ 15 ರನ್ ಗಳಿಸಿದರೆ 4000 ರನ್‌ಗಳ ಕ್ಲಬ್ ಸೇರಿದ 9ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಮೈಲಿಗಲ್ಲನ್ನು ವೇಗವಾಗಿ ತಲುಪಿದ ಐದನೇ ಆಟಗಾರ ಎನಿಸಿಕೊಂಡಿದ್ದಾರೆ.
ಇನ್ನು ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಈ ಪಂದ್ಯದಲ್ಲಿ ಇನ್ನೇಡರು ಬೌಂಡರಿಗಳನ್ನು ಬಾರಿಸಿದ್ರೆ ಐಪಿಎಲ್ ನಲ್ಲಿ 200 ಬೌಂಡರಿಗಳನ್ನ ದಾಖಲಿಸಿದ ಸಾಧನೆ ಮಾಡಲಿದ್ದಾರೆ. ಇನ್ನೂ 5 ರನ್ ಗಳಿಸಿದರೆ .. ಅಯ್ಯರ್ 2400 ರನ್ ಗಡಿ ತಲುಪುತ್ತಾರೆ. ipl-2022-rcb-vs-kkr-virat-kohli-eye-big-records