RCB vs SRH Match preview : ಸೇಡು ತೀರಿಸಿಕೊಳ್ಳುತ್ತಾ ಬೆಂಗಳೂರು
ಇಂಡಿಯನ್ ಪ್ರಿಮಿಯರ್ ಲೀಗ್ ನ 54 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.
ಮುಂಬೈನ ವಾಂಖೆಡೆ ಮೈದಾನದಲ್ಲಿ ಈ ಪಂದ್ಯ ನಡೆಯಲಿದ್ದು, ಗೆಲುವಿವಾಗಿ ಉಭಯ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿದೆ.
ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಆವೃತ್ತಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ.
ಕಳೆದ ಬಾರಿ ಸೆಣಸಾಡಿದ್ದಾಗ ಆರ್ ಸಿಬಿ ತಂಡ ಅತ್ಯಂತ ಹೀನಾಯವಾಗಿ ಸೋಲು ಕಂಡಿತ್ತು. ಎಸ್ ಆರ್ ಹೆಚ್ 9 ವಿಕೆಟ್ ಗಳಿಂದ ಜಯ ಸಾಧಿಸಿತ್ತು.
ಕೇನ್ ವಿಲಿಯಂ ಸನ್ ನಾಯಕತ್ವದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಆವೃತ್ತಿಯಲ್ಲಿ ಈವರೆಗೂ 10 ಪಂದ್ಯಗಳನ್ನಾಡಿದೆ.
ಈ ಪೈಕಿ ಸನ್ ರೈಸರ್ಸ್ ತಂಡ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.
ಇತ್ತ ಫಾಫ್ ಡುಪ್ಲಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಸೀಸನ್ ನಲ್ಲಿ 11 ಪಂದ್ಯಗಳನ್ನಾಡಿದೆ.
ಇದರಲ್ಲಿ 6 ಪಂದ್ಯಗಳನ್ನು ಗೆದ್ದು ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಅಂದಹಾಗೆ ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಟ ನಡೆಸಿತ್ತು. ಇದರಲ್ಲಿ 21 ರನ್ ಗಳಿಂದ ಎಸ್ ಆರ್ ಹೆಚ್ ಸೋಲು ಕಂಡಿದೆ. ಈ ಪಂದ್ಯದಲ್ಲಿ ನಿಕೋಲಸ್ ಪೂರನ್ 62 ರನ್, ಐಡನ್ ಮಾರ್ಕ್ರಾಂ 42 ರನ್ ಗಳಿಸಿದ್ದರು.
ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿತ್ತು.
ಈ ಪಂದ್ಯದಲ್ಲಿ ಸಾಂಘಿಕ ಪ್ರದರ್ಶನ ನೀಡಿದ ಆರ್ ಸಿಬಿ 13 ರನ್ ಗಳಿಂದ ಜಯ ಸಾಧಿಸಿತ್ತು. ಆರ್ ಸಿಬಿ ಪರ ಮಹಿಪಾಲ್ ಲೋಮ್ರೋರ್ 42 ರನ್ ಗಳಿಸಿದ್ರು.
ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ
ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ತಂಡದ ಆಲ್ ರೌಂಡರ್, ಮಾರ್ಕೋ ಜಾನ್ಸನ್ ಇಂಚೂರಿ ಆಗಿದ್ದಾರೆ. ಇಂದಿನ ಪಂದ್ಯಕ್ಕೆ ಕಂ ಬ್ಯಾಕ್ ಮಾಡ್ತಾರೋ ಇಲ್ಲವೋ ಅನ್ನೋದನ್ನಕಾದು ನೋಡಬೇಕು. ಇನ್ನುಳಿಂದ ತಂಡದಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಆರಂಭಿಕರಾಗಿ ಅಭಿಷೇಕ್ ಶರ್ಮಾ, ನಾಯಕ ಕೇನ್ ವಿಲಿಯಂ ಸನ್ ಉತ್ತಮ ಆರಂಭ ನೀಡುತ್ತಿದ್ದಾರೆ. ಆದ್ರೆ ವಿಲಿಯಮ್ ಸನ್ ಬ್ಯಾಟಿಂಗ್ ಸ್ಟ್ರೈಕ್ ರೇಟ್ ಚೆನ್ನಾಗಿಲ್ಲ. ಒನ್ ಡೌನ್ ನಲ್ಲಿ ಬರುವ ರಾಹುಲ್ ತ್ರಿಪಾಟಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಮಿಡಲ್ ಆರ್ಡರ್ ನಲ್ಲಿ ಐಡನ್ ಮಾರ್ಕಾಂ, ನಿಕೋಲಸ್ ಪೂರನ್, ಶಶಾಂಕ್ ಸಿಂಗ್ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದು, ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.
ಬೌಲಿಂಗ್ ವಿಚಾರಕ್ಕೆ ಬಂದ್ರೆ ಎಸ್ ಆರ್ ಹೆಚ್ ಗೆ ಬೌಲಿಂಗ್ ವಿಭಾಗವೇ ಬಲವಾಗಿದೆ. ಭುವನೇಶ್ವರ್ ಕುಮಾರ್, ಉಮ್ರಾನ್ ಮಲ್ಲಿಕ್ ವಿಕೆಟ್ ಬೇಟೆಯಾಡುತ್ತಿದ್ದಾರೆ. ಇವರಿಗೆ ಸೀನ್ ಅಬ್ಬಾಟ್, ಕಾರ್ತಿಕ್ ತ್ಯಾಗಿ ಸಾಥ್ ನೀಡಬೇಕಿದೆ. ಶ್ರೇಯಸ್ ಅಯ್ಯರ್ ಕೂಡ ಆಕ್ರಮಣಕಾರಿಯಾಗಿ ಬೌಲಿಂಗ್ ಮಾಡಬೇಕಿದೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಚಾರಕ್ಕೆ ಬಂದರೇ ತಂಡದ ಗೆಲುವು ನಿಂತಿರೋದೇ ಸಾಂಘಿಕ ಆಟದ ಮೇಲೆ. ಬ್ಯಾಟಿಂಗ್, ಬೌಲಿಂಗ್ ವಿಭಾಗ ಕ್ಲಿಕ್ ಆದ್ರೆ ತಂಡಕ್ಕೆ ಗೆಲುವು ಖಚಿತ. ಕಳೆದ ಪಂದ್ಯದಲ್ಲಿ ಆರಂಭಿಕರಾಗಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲಸಿಸ್ ಉತ್ತಮ ಜೊತೆಯಾಟ ನೀಡಿದ್ರು, ಆದ್ರೆ ವಿರಾಟ್ ಬ್ಯಾಟಿಂಗ್ ಸ್ಟ್ರೈಕ್ ರೇಟ್ ಚೆನ್ನಾಗಿಲ್ಲ. ಮ್ಯಾಕ್ಸ್ ವೆಲ್ ಬ್ಯಾಟಿಂಗ್ ನಲ್ಲಿ ಸದ್ದು ಮಾಡುತ್ತಿಲ್ಲ. ಆದ್ರೆ ಯುವ ಬ್ಯಾಟರ್ ಗಳಾದ ರಜತ್ ಪಟಿದಾರ್, ಮಹಿಪಾಲ್ ಲೋಮ್ರೋರ್ ಅದ್ಭುತವಾಗಿ ಆಡುತ್ತಿದ್ದಾರೆ. ಇದು ತಂಡದ ಆತ್ಮ ವಿಶ್ವಾಸ ಹೆಚ್ಚಿಸಿದೆ. ಕೆಲ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್, ಶಹಬ್ಬಾಸ್ ಮೇಲೆ ತಂಡಕ್ಕೆ ನಂಬಿಕೆ ಇದೆ.
ಇನ್ನು ಬೌಲಿಂಗ್ ವಿಭಾಗಕ್ಕೆ ಬಂದರೇ ಮಹ್ಮದ್ ಸಿರಾಜ್ ದುಬಾರಿಯಾಗುತ್ತಿರೋದು ತಂಡಕ್ಕೆ ತಲೆನೋವಾಗಿದೆ. ಇವರನ್ನು ಹೊರತು ಪಡಿಸಿದ್ರೆ ಜೋಸ್ ಹೆಜಲ್ ವುಡ್, ಹರ್ಷಲ್ ಪಟೇಲ್ ಮ್ಯಾಚ್ ವಿನ್ನಿಂಗ್ಸ್ ಸ್ಪೆಲ್ ಮಾಡುತ್ತಿದ್ದಾರೆ. ಹಸರಂಗ ವಿಕೆಟ್ ಬೇಟೆಯಾಗುತ್ತಿದ್ದಾರೆ. ಐದನೇ ಬೌಲರ್ ಆಗಿ ಮ್ಯಾಕ್ಸಿ, ಶಹಬ್ಬಾಸ್ ಕಮಾಲ್ ಮಾಡುತ್ತಿದ್ದಾರೆ. IPL 2022 rcb-vs-srh-match-preview