ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB vs SRH Match preview : ಸೇಡು ತೀರಿಸಿಕೊಳ್ಳುತ್ತಾ ಬೆಂಗಳೂರು

Mahesh M Dhandu by Mahesh M Dhandu
May 8, 2022
in Newsbeat, Sports, ಕ್ರೀಡೆ
IPL 2022 rcb-vs-srh-match-preview saaksha tv

IPL 2022 rcb-vs-srh-match-preview saaksha tv

Share on FacebookShare on TwitterShare on WhatsappShare on Telegram

RCB vs SRH Match preview : ಸೇಡು ತೀರಿಸಿಕೊಳ್ಳುತ್ತಾ ಬೆಂಗಳೂರು

ಇಂಡಿಯನ್ ಪ್ರಿಮಿಯರ್ ಲೀಗ್ ನ 54 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026

ಮುಂಬೈನ ವಾಂಖೆಡೆ ಮೈದಾನದಲ್ಲಿ ಈ ಪಂದ್ಯ ನಡೆಯಲಿದ್ದು, ಗೆಲುವಿವಾಗಿ ಉಭಯ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸಲಿದೆ.  

ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಆವೃತ್ತಿಯಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ.

ಕಳೆದ ಬಾರಿ ಸೆಣಸಾಡಿದ್ದಾಗ ಆರ್ ಸಿಬಿ ತಂಡ ಅತ್ಯಂತ ಹೀನಾಯವಾಗಿ ಸೋಲು ಕಂಡಿತ್ತು.  ಎಸ್ ಆರ್ ಹೆಚ್ 9 ವಿಕೆಟ್ ಗಳಿಂದ ಜಯ ಸಾಧಿಸಿತ್ತು.

ಕೇನ್ ವಿಲಿಯಂ ಸನ್ ನಾಯಕತ್ವದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಆವೃತ್ತಿಯಲ್ಲಿ ಈವರೆಗೂ 10 ಪಂದ್ಯಗಳನ್ನಾಡಿದೆ.

ಈ ಪೈಕಿ ಸನ್ ರೈಸರ್ಸ್ ತಂಡ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಇತ್ತ ಫಾಫ್ ಡುಪ್ಲಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಸೀಸನ್ ನಲ್ಲಿ 11 ಪಂದ್ಯಗಳನ್ನಾಡಿದೆ.

ಇದರಲ್ಲಿ 6 ಪಂದ್ಯಗಳನ್ನು ಗೆದ್ದು ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ  12 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಅಂದಹಾಗೆ ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಾಟ ನಡೆಸಿತ್ತು. ಇದರಲ್ಲಿ 21 ರನ್ ಗಳಿಂದ ಎಸ್ ಆರ್ ಹೆಚ್ ಸೋಲು ಕಂಡಿದೆ. ಈ ಪಂದ್ಯದಲ್ಲಿ ನಿಕೋಲಸ್ ಪೂರನ್ 62 ರನ್, ಐಡನ್ ಮಾರ್ಕ್ರಾಂ 42 ರನ್ ಗಳಿಸಿದ್ದರು.

ಮತ್ತೊಂದೆಡೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿತ್ತು.

ಈ ಪಂದ್ಯದಲ್ಲಿ ಸಾಂಘಿಕ ಪ್ರದರ್ಶನ ನೀಡಿದ ಆರ್ ಸಿಬಿ 13 ರನ್ ಗಳಿಂದ ಜಯ ಸಾಧಿಸಿತ್ತು.  ಆರ್ ಸಿಬಿ ಪರ ಮಹಿಪಾಲ್ ಲೋಮ್ರೋರ್ 42 ರನ್ ಗಳಿಸಿದ್ರು.

IPL 2022 rcb-vs-srh-match-preview   saaksha tv

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ತಂಡದ ಆಲ್ ರೌಂಡರ್, ಮಾರ್ಕೋ ಜಾನ್ಸನ್ ಇಂಚೂರಿ ಆಗಿದ್ದಾರೆ. ಇಂದಿನ ಪಂದ್ಯಕ್ಕೆ ಕಂ ಬ್ಯಾಕ್ ಮಾಡ್ತಾರೋ ಇಲ್ಲವೋ ಅನ್ನೋದನ್ನಕಾದು ನೋಡಬೇಕು. ಇನ್ನುಳಿಂದ ತಂಡದಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಆರಂಭಿಕರಾಗಿ ಅಭಿಷೇಕ್ ಶರ್ಮಾ, ನಾಯಕ ಕೇನ್ ವಿಲಿಯಂ ಸನ್ ಉತ್ತಮ ಆರಂಭ ನೀಡುತ್ತಿದ್ದಾರೆ. ಆದ್ರೆ ವಿಲಿಯಮ್ ಸನ್ ಬ್ಯಾಟಿಂಗ್ ಸ್ಟ್ರೈಕ್ ರೇಟ್ ಚೆನ್ನಾಗಿಲ್ಲ. ಒನ್ ಡೌನ್ ನಲ್ಲಿ ಬರುವ ರಾಹುಲ್ ತ್ರಿಪಾಟಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಮಿಡಲ್ ಆರ್ಡರ್ ನಲ್ಲಿ ಐಡನ್ ಮಾರ್ಕಾಂ, ನಿಕೋಲಸ್ ಪೂರನ್, ಶಶಾಂಕ್ ಸಿಂಗ್ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದು, ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಬೌಲಿಂಗ್ ವಿಚಾರಕ್ಕೆ ಬಂದ್ರೆ ಎಸ್ ಆರ್ ಹೆಚ್ ಗೆ ಬೌಲಿಂಗ್ ವಿಭಾಗವೇ ಬಲವಾಗಿದೆ. ಭುವನೇಶ್ವರ್ ಕುಮಾರ್, ಉಮ್ರಾನ್ ಮಲ್ಲಿಕ್ ವಿಕೆಟ್ ಬೇಟೆಯಾಡುತ್ತಿದ್ದಾರೆ. ಇವರಿಗೆ ಸೀನ್ ಅಬ್ಬಾಟ್, ಕಾರ್ತಿಕ್ ತ್ಯಾಗಿ ಸಾಥ್ ನೀಡಬೇಕಿದೆ. ಶ್ರೇಯಸ್ ಅಯ್ಯರ್ ಕೂಡ ಆಕ್ರಮಣಕಾರಿಯಾಗಿ ಬೌಲಿಂಗ್ ಮಾಡಬೇಕಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಚಾರಕ್ಕೆ ಬಂದರೇ ತಂಡದ ಗೆಲುವು ನಿಂತಿರೋದೇ ಸಾಂಘಿಕ ಆಟದ ಮೇಲೆ. ಬ್ಯಾಟಿಂಗ್, ಬೌಲಿಂಗ್ ವಿಭಾಗ ಕ್ಲಿಕ್ ಆದ್ರೆ ತಂಡಕ್ಕೆ ಗೆಲುವು ಖಚಿತ.  ಕಳೆದ ಪಂದ್ಯದಲ್ಲಿ ಆರಂಭಿಕರಾಗಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲಸಿಸ್ ಉತ್ತಮ ಜೊತೆಯಾಟ ನೀಡಿದ್ರು, ಆದ್ರೆ ವಿರಾಟ್ ಬ್ಯಾಟಿಂಗ್ ಸ್ಟ್ರೈಕ್ ರೇಟ್ ಚೆನ್ನಾಗಿಲ್ಲ. ಮ್ಯಾಕ್ಸ್ ವೆಲ್ ಬ್ಯಾಟಿಂಗ್ ನಲ್ಲಿ ಸದ್ದು ಮಾಡುತ್ತಿಲ್ಲ. ಆದ್ರೆ ಯುವ ಬ್ಯಾಟರ್ ಗಳಾದ ರಜತ್ ಪಟಿದಾರ್, ಮಹಿಪಾಲ್ ಲೋಮ್ರೋರ್ ಅದ್ಭುತವಾಗಿ ಆಡುತ್ತಿದ್ದಾರೆ. ಇದು ತಂಡದ ಆತ್ಮ ವಿಶ್ವಾಸ ಹೆಚ್ಚಿಸಿದೆ. ಕೆಲ ಕ್ರಮಾಂಕದಲ್ಲಿ ದಿನೇಶ್ ಕಾರ್ತಿಕ್, ಶಹಬ್ಬಾಸ್ ಮೇಲೆ ತಂಡಕ್ಕೆ ನಂಬಿಕೆ ಇದೆ.

ಇನ್ನು ಬೌಲಿಂಗ್ ವಿಭಾಗಕ್ಕೆ ಬಂದರೇ ಮಹ್ಮದ್ ಸಿರಾಜ್ ದುಬಾರಿಯಾಗುತ್ತಿರೋದು ತಂಡಕ್ಕೆ ತಲೆನೋವಾಗಿದೆ. ಇವರನ್ನು ಹೊರತು ಪಡಿಸಿದ್ರೆ ಜೋಸ್ ಹೆಜಲ್ ವುಡ್, ಹರ್ಷಲ್ ಪಟೇಲ್ ಮ್ಯಾಚ್ ವಿನ್ನಿಂಗ್ಸ್ ಸ್ಪೆಲ್ ಮಾಡುತ್ತಿದ್ದಾರೆ. ಹಸರಂಗ ವಿಕೆಟ್ ಬೇಟೆಯಾಗುತ್ತಿದ್ದಾರೆ. ಐದನೇ ಬೌಲರ್ ಆಗಿ ಮ್ಯಾಕ್ಸಿ, ಶಹಬ್ಬಾಸ್ ಕಮಾಲ್ ಮಾಡುತ್ತಿದ್ದಾರೆ.     IPL 2022 rcb-vs-srh-match-preview 

Tags: #Saaksha TVipl 2022RCBRCB vs SRHsrh
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram