SRH vs DC Match | ಹೆಡ್ ಟು ಹೆಡ್ ರೆಕಾರ್ಡ್ ಯಾರ ಕಡೆ ಇದೆ..?
ಇಂಡಿಯನ್ ಪ್ರಿಮಿಯರ್ ಲೀಗ್ ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಇಂದಿನ ಪಂದ್ಯ ನಡೆಯಲಿದ್ದು, ಗೆಲುವಿಗಾಗಿ ಉಭಯ ತಂಡಗಳು ಗುದ್ದಾಟ ನಡೆಸಲಿವೆ.
ರಿಷತ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸದ್ಯ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಕೇನ್ ವಿಲಿಯಂ ಸನ್ ಸಾರಥ್ಯದ ಸನ್ ರೈಸರ್ಸ್ ಹೈದರಾಬಾದ್ ತಂಡ ಐದನೇ ಸ್ಥಾನದಲ್ಲಿದೆ.
ಈ ಸೀಸನ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಒಂಭತ್ತು ಪಂದ್ಯಗಳನ್ನಾಡಿದ್ದು, ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಐದು ಪಂದ್ಯಗಳಲ್ಲಿ ಸೋಲು ಕಂಡಿದೆ. ಇನ್ನುಳಿದ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ ಡೆಲ್ಲಿಗೆ ಪ್ಲೇ ಆಫ್ಸ್ ಚಾನ್ಸ್ ಇದೆ. ಈ ಕಾರಣಕ್ಕಾಗಿ ಡೆಲ್ಲಿ ಗೆಲುವಿಗಾಗಿ ಹೋರಾಟ ನಡೆಸಲಿದೆ.
ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡ ಒಂಭತ್ತು ಪಂದ್ಯಗಳನ್ನಾಡಿದ್ದು, ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪ್ಲೇ ಆಫ್ಸ್ ದೃಷ್ಠಿಯಿಂದ ಹೈದರಾಬಾದ್ ತಂಡಕ್ಕೂ ಗೆಲುವು ಅನಿವಾರ್ಯವಾಗಿದೆ.
ಅಂದಹಾಗೆ ಕಳೆದ ಪಂದ್ಯದಗಳಲ್ಲಿ ಡೆಲ್ಲಿ ತಂಡ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಡೆಲ್ಲಿ ತಂಡ ಆರು ರನ್ ಗಳಿಂದ ಸೋಲು ಕಂಡಿದೆ. ಡೆಲ್ಲಿ ಪರ ಅಕ್ಷರ್ ಪಟೇಲ್ 42 ರನ್ , ಪಂತ್ 44 ರನ್ ಗಳಿಸಿದ್ದರು. ಅದೇ ರೀತಿ ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೋರಾಟ ನಡೆಸಿತ್ತು. ಈ ವೇಳೆ ಎಸ್ ಆರ್ ಹೆಚ್ 13 ರನ್ ಗಳಿಂದ ಸೋಲು ಕಂಡಿತ್ತು. ಕೇನ್ ವಿಲಿಯಂ ಸನ್ 47 ಮತ್ತು ಪೂರನ್ 64 ರನ್ ಗಳಿಸಿದ್ದರು.
ಉಭಯ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್ ನೋಡೋದಾದ್ರೆ
ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಈವರಗೂ ಉಭಯ ತಂಡಗಳು 20 ಪಂದ್ಯಗಳನ್ನಾಡಿವೆ. ಈ ಪೈಕಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮೇಲು ಗೈ ಸಾಧಿಸಿದೆ.ಡೆಲ್ಲಿ ಕ್ಯಾಪಿಟಲ್ಸ್ ತಂಡ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೇ ಸನ್ ರೈಸರ್ಸ್ ಹೈದರಾಬಾದ್ ತಂಡ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಇನ್ನು ಕಳೆದ ಐದು ಪಂದ್ಯಗಳ ವಿಚಾರಕ್ಕೆ ಬಂದರೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೇಲು ಗೈ ಸಾಧಿಸಿದೆ. ಯಾಕಂದರೇ ಐದು ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೂರು ಪಂದ್ಯಗಳಲ್ಲಿ ಗೆದ್ದಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ. 2021 ರ ಐಪಿಎಲ್ ನಲ್ಲಿ ಡೆಲ್ಲಿ ತಂಡ ಕ್ಲೀನ್ ಸ್ವೀಪ್ ಸಾಧಿಸಿದ್ದು, ಎರಡಕ್ಕೆ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಅಂದಹಾಗೆ ಮೊದಲು ಬ್ಯಾಟಿಂಗ್ ಮಾಡಿದಾಗ ಸನ್ ರೈಸರ್ಸ್ ತಂಡದ ಐದು ಬಾರಿ ಗೆಲುವು ಸಾಧಿಸಿದೆ, ಡೆಲ್ಲಿ ತಂಡ ನಾಲ್ಕು ಬಾರಿ ಗೆದ್ದಿದೆ.
ಚೇಸಿಂಗ್ ಮಾಡಿದಾಗ ಡೆಲ್ಲಿ ಐದು ಬಾರಿ ಗೆದ್ದರೇ ಸನ್ ರೈಸರ್ಸ್ ಆರು ಬಾರಿ ಗೆದ್ದಿದೆ.