IPL 2022 : ಯಂಗ್ ಸ್ಪೀಡ್ ಗನ್ ಮಲ್ಲಿಕ್ ಪರ ಭಜ್ಜಿ ಪರ ಬ್ಯಾಟಿಂಗ್
ಐಪಿಎಲ್-2022ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವೇಗಿ ಉಮ್ರಾನ್ ಮಲಿಕ್ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.
ತಮ್ಮ ವೇಗದ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟ್ಸ್ ಮನ್ ಗಳಿಗೆ ಉಮ್ರಾನ್ ಭಯ ಹುಟ್ಟಿಸುತ್ತಿದ್ದಾರೆ.
ಮಲಿಕ್ ತನ್ನ ಅದ್ಭುತ ಬೌಲಿಂಗ್ ನಿಂದ ಎಲ್ಲರನ್ನೂ ಆಕರ್ಷಿಸುತ್ತಿದ್ದಾರೆ.
ಹೀಗಾಗಿ ಉಮ್ರಾನ್ ಮಲಿಕ್ ಅವರನ್ನು ಆದಷ್ಟು ಬೇಗ ಭಾರತ ತಂಡಕ್ಕೆ ಆಯ್ಕೆಯಾಗಬೇಕೆಂದು ಮಾಜಿ ಮತ್ತು ಕ್ರಿಕೆಟ್ ತಜ್ಞರು ಅಭಿಪ್ರಾಯಪಡುತ್ತಿದ್ದಾರೆ.
ಈ ಸಾಲಿಗೆ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರ್ಪಡೆಯಾಗಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಉಮ್ರಾನ್ ಮಲಿಕ್ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಬೇಕೆಂದು ಹರ್ಭಜನ್ ಸಿಂಗ್ ಆಶಿಸಿದ್ದಾರೆ.
“ಉಮ್ರಾನ್ ಮಲಿಕ್ ನನ್ನ ನೆಚ್ಚಿನ ಬೌಲರ್, ನಾನು ಅವರನ್ನು ಭಾರತ ತಂಡದಲ್ಲಿ ನೋಡಲು ಬಯಸುತ್ತೇನೆ.
ಏಕೆಂದರೆ ಅತ್ಯುತ್ತಮ ವೇಗದ ಬೌಲರ್. ಅವರು 150 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುತ್ತಿದ್ದಾರೆ.
ಇಷ್ಟು ವೇಗದಲ್ಲಿ ಬೌಲಿಂಗ್ ಮಾಡುವ ಯಾವ ಬೌಲರ್ ಕೂಡ ರಾಷ್ಟ್ರೀಯ ತಂಡದಲ್ಲಿ ಆಡಿಲ್ಲ.
ಅವರು ತಮ್ಮ ಪ್ರದರ್ಶನದಿಂದ ಅನೇಕ ಯುವ ಆಟಗಾರರಿಗೆ ಆದರ್ಶಪ್ರಾಯರಾಗಿದ್ದಾರೆ.
ಅವರು ಟಿ20 ವಿಶ್ವಕಪ್‌ಗೆ ಆಯ್ಕೆಯಾಗುತ್ತಾರೋ ಇಲ್ಲವೋ ಗೊತ್ತಿಲ್ಲ.
ಆದರೆ ನಾನು ಆಯ್ಕೆ ಸಮಿತಿಯ ಭಾಗವಾಗಿದ್ದರೆ, ನಾನು ಖಂಡಿತವಾಗಿಯೂ ಅವರನ್ನು ಆಯ್ಕೆ ಮಾಡುತ್ತೇನೆ.
ಟಿ20 ವಿಶ್ವಕಪ್‌ನಲ್ಲಿ ಜಸ್‌ಪ್ರೀತ್ ಬುಮ್ರಾಗೆ ಮಲಿಕ್ ಸರಿಯಾದ ಜೋಡಿ” ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.