IPL 2022 – ಮುಂಬೈನಲ್ಲಿ RCB ತಂಡ ಕೂಡಿಕೊಂಡ ಕಿಂಗ್ ಕೊಹ್ಲಿ
ಐಪಿಎಲ್ 2022 ರ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಬಹುತೇಕ ಎಲ್ಲಾ ಆಟಗಾರರು ಆಯಾ ಫ್ರಾಂಚೈಸಿಗಳನ್ನು ಸೇರಿಕೊಳ್ಳುತ್ತಿದ್ದಾರೆ, ಸೋಮವಾರ ಮಧ್ಯಾಹ್ನದವರೆಗೆ ವಿರಾಟ್ ಕೊಹ್ಲಿ ಫ್ರಾಂಚೈಸಿಗೆ ಸೇರ್ಪಡೆಗೊಳ್ಳುವ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ. ಆದರೆ, ಸಂಜೆಯ ವೇಳೆಗೆ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ಖುಷಿ ಪಡುವವಂತಹ ಅವಕಾಶ ನೀಡಿದರು.
ವಿರಾಟ್ ಕೊಹ್ಲಿ ಸೋಮವಾರ ಸಂಜೆ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಸೇರಿಕೊಂಡಿದ್ದಾರೆ. 2013 ರಿಂದ 2021 ರವರೆಗೆ ಈ ತಂಡದ ನಾಯಕನಾಗಿ ಆಡುತ್ತಿದ್ದ ಕೊಹ್ಲಿ ಈ ವರ್ಷ ಕೇವಲ ಬ್ಯಾಟರ್ ಆಗಿ ಆಡುತ್ತಿದ್ದಾರೆ. ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ಫಾಫ್ ಡು ಪ್ಲೆಸಿಸ್ ವಹಿಸಿಕೊಳ್ಳಲಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಕೊಹ್ಲಿಗೆ ಅದ್ಧೂರಿ ಸ್ವಾಗತ ನೀಡಿದೆ. ಈ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ‘ಕಿಂಗ್ ಕೊಹ್ಲಿ ಬಂದಿದ್ದಾರೆ’ ಎಂಬ ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ಬೆಂಗಳೂರು ತಂಡ ಇದುವರೆಗೆ ಐಪಿಎಲ್ ಕಪ್ ಗೆದ್ದಿಲ್ಲ, ತಂಡವನ್ನು ಚಾಂಪಿಯನ್ ಮಾಡುವ ಜವಾಬ್ದಾರಿ ಡುಪ್ಲೆಸಿಸ್ ಅವರ ಹೆಗಲಿಗೆ ಹೊರಿಸಲಾಗಿದೆ. ಮಾರ್ಚ್ 27 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ತನ್ನ ಅಭಿಯಾನವನ್ನು RCB ಪ್ರಾರಂಭಿಸಲಿದೆ.
King Kohli has arrived! That’s it. That’s the news. 🙌🏻👑 @imVkohli #PlayBold #WeAreChallengers #IPL2022 #Mission2022 #ViratKohli pic.twitter.com/P8W9ICCwOX
— Royal Challengers Bangalore (@RCBTweets) March 21, 2022
ಕಳೆದ ಋತುವಿನಲ್ಲಿ ಬೆಂಗಳೂರು ಪ್ಲೇ ಆಫ್ ತಲುಪುವಲ್ಲಿ ಯಶಸ್ವಿಯಾಗಿತ್ತು, ಆದರೆ ಅದನ್ನು ಮೀರಿ ಮುನ್ನಡೆಯಲು ಸಾಧ್ಯವಾಗಲಿಲ್ಲ. ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಮೆಗಾ ಹರಾಜಿಗೂ ಮುಂಚೆ ಫ್ರಾಂಚೈಸಿ ಉಳಿಸಿಕೊಂಡಿತ್ತು. IPL 2022 ಮಾರ್ಚ್ 26 ರಿಂದ ಪ್ರಾರಂಭವಾಗಲಿದೆ. 15ನೇ ಋತುವಿನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಫಾಫ್ ಡು ಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಜೋಶ್ ಹೇಜಲ್‌ವುಡ್, ಶಹಬಾಜ್ ಅಹ್ಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಜಾನ್ ಅಲೆನ್, ಶೆಡ್ರ್‌ಫಾರ್‌ಫೊರ್ನ್ ಅಲೆನ್, , ಸುಯಶ್ ಪ್ರಭುದೇಸಾಯಿ, ಚಾಮಾ ಮಿಲಿಂದ್, ಅನೀಶ್ವರ್ ಗೌತಮ್, ಕರಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಲವನಿತ್ ಸಿಸೋಡಿಯಾ, ಡೇವಿಡ್ ವಿಲ್ಲಿ.
IPL 2022: Virat Kohli associated with Royal Challengers Bangalore team, the franchise welcomed something like this,