ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಪ್ಲೇ ಆಫ್ಸ್ ಗೆ CSK.. ಧೋನಿ ಇದ್ದರೇ ಎಲ್ಲವೂ ಸಾಧ್ಯ

Mahesh M Dhandu by Mahesh M Dhandu
May 3, 2022
in Newsbeat, Sports, ಕ್ರಿಕೆಟ್
dhoni-will-be-the-captain-of-csk-in-ipl-2023 saaksha tv

dhoni-will-be-the-captain-of-csk-in-ipl-2023 saaksha tv

Share on FacebookShare on TwitterShare on WhatsappShare on Telegram

IPL 2022 | ಪ್ಲೇ ಆಫ್ಸ್ ಗೆ CSK.. ಧೋನಿ ಇದ್ದರೇ ಎಲ್ಲವೂ ಸಾಧ್ಯ

ಸರಣಿ ಸೋಲುಗಳಿಂದ ಕಂಗೆಟ್ಟು ಈಗ ಗೆಲುವಿನ ಟ್ರ್ಯಾಕ್ ಬಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಪ್ಲೇ ಆಫ್ಸ್ ಗೆ ಎಂಟ್ರಿ ಕೊಡುತ್ತಾ ಎಂಬ ಕುತೂಹಲಕಾರಿ ಪ್ರಶ್ನೆ ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಮನೆ ಮಾಡಿದೆ.

Related posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

March 27, 2026
ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

March 27, 2026

ಇಷ್ಟು ದಿನ ಇಲ್ಲದೇ ಇರುವ ಚರ್ಚೆ ಈಗ ಹುಟ್ಟಿಕೊಂಡಿದ್ದು ಹೇಗೆ ಅನ್ನೋ ಪ್ರಶ್ನೆಗೆ ಉತ್ತರ.. ಎಂ ಎಸ್ ಧೋನಿ ಮತ್ತೆ ಚೆನ್ನೈ ತಂಡ ನಾಯಕರಾಗಿರೋದು.

ಹೌದು..! ಎಂ.ಎಸ್.ಧೋನಿ ಗೆಲುವಿಗೆ ಕೇರ್ ಆಫ್ ಅಡ್ರೆಸ್..! ನಮಗೆಲ್ಲಾ ತಿಳಿದಿರುವಂತೆ ಈ ಬಾರಿಯ ಆರಂಭಕ್ಕೂ ಮುನ್ನಾ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದಿಂದ ಕೆಳಗಿದರು.

ಅವರ ಸಲಹೆಯಂತೆ ಸರ್ ರವೀಂದ್ರ ಜಡೇಜಾ ಚೆನ್ನೈ ತಂಡದ ಸಾರಥಿಯಾದ್ರು. ಆದ್ರೆ ಜಡ್ಡು ನಾಯಕತ್ವದಲ್ಲಿ ಚೆನ್ನೈ ಘನಘೋರವಾಗಿ ವೈಫಲ್ಯ ಅನುಭವಿಸಿತ್ತು.

ಜಡೇಜಾ ನಾಯಕತ್ವದಲ್ಲಿ ಸಿಎಸ್ ಕೆ ಆಡಿದ ಎಂಟು ಪಂದ್ಯಗಳಲ್ಲಿ ಆರು ಪಂದ್ಯಗಳಲ್ಲಿ ಸೋತು ಅಂಕ ಪಟ್ಟಿಯಲ್ಲಿ ಒಂಭತ್ತನೇ ಸ್ಥಾನದಲ್ಲಿದೆ. ಇತ್ತ ಜಡ್ಡು ಕೂಡ ವೈಯುಕ್ತಿಕವಾಗಿ ಉತ್ತಮ ಪ್ರದರ್ಶನ ನೀಡಲಿಲ್ಲ.

ಜೊತೆಗೆ ತಂಡವನ್ನು ಉತ್ತಮವಾಗಿ ಮುಂದುವರಿಸಲು ಕೂಡ ವಿಫಲಾರದರು. ಹೀಗಾಗಿ ಸನ್ ರೈಸರ್ಸ್ ವಿರುದ್ದದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಮತ್ತೆ ತಂಡದ ಸಾರಥ್ಯ ವಹಿಸಿಕೊಂಡರು. ಅಲ್ಲದೇ ಸನ್ ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಗೆಲುವನ್ನ ಕೂಡ ಸಾಧಿಸಿದರು.

ipl-2022-virender-sehwag-feels-csk-can-qualify-playoffs saaksha tv

ಇಲ್ಲಿಗೆ ಚೆನ್ನೈ ತಂಡದ ಅಭಿಮಾನಿಗಳಲ್ಲಿ ಪ್ಲೇ ಆಫ್ಸ್ ಆಸೆ ಮತ್ತೆ ಉದಯಿಸಿದೆ. ತಲಾ ಧೋನಿ ಖಂಡಿತವಾಗಿಯೂ ಮ್ಯಾಜಿಕ್ ಮಾಡ್ತಾರೆ ಎಂದು ನಂಬಿಕೊಂಡಿದ್ದಾರೆ.

 ಇದೆಲ್ಲದರ ನಡುವೆ ಇದೀಗ ಟೀಂ ಇಂಡಿಯಾದ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಕೊಟ್ಟ ಹೇಳಿಕೆ ಕೂಡ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸರಣಿ ಗೆಲುವುಗಳನ್ನು ಸಾಧಿಸಿ ಪ್ಲೇ ಆಫ್ಸ್ ಪ್ರವೇಶಿಸಲಿದೆ ಎಂದು ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ.

“ನಾನು 2005 ರಿಂದ ಧೋನಿ ಜೊತೆ ಇದ್ದೇನೆ. ಅವರ ನಾಯಕತ್ವದಲ್ಲಿ ಟೀಂ ಇಂಡಿಯಾದಲ್ಲಿ ಏನೆಲ್ಲಾ ಬದಲಾವಣೆಗಳಾಗಿವೆ ಎಂದು ನೋಡಿದ್ದೇನೆ. ಐಸಿಸಿ ನಾಕೌಟ್‌ ಪಂದ್ಯಗಳಲ್ಲಿ ಗೆದ್ದಿದ್ದೇವೆ.

ಸೋಲುತ್ತಿರುವ ಪಂದ್ಯಗಳಲ್ಲಿ ಕೊನೆ ಕ್ಷಣದವರೆಗೂ ಹೋರಾಡಿ ಗೆಲುವು ಸಾಧಿಸಿದ್ದೇವೆ. ಇವೆಲ್ಲವನ್ನೂ ನೆನಪು ಮಾಡಿಕೊಳ್ಳುತ್ತಿದ್ದರೇ ಚೆನ್ನೈ ಸೂಪರ್ ಕಿಂಗ್ಸ್ ಖಂಡಿತವಾಗಿಯೂ ಸರಣಿ ಗೆಲುವುಗಳನ್ನು ಸಾಧಿಸಿ ಪ್ಲೇ ಆಫ್ಸ್ ಪ್ರವೇಶಿಸಲಿದೆ ಎಂದು ಸೆಹ್ವಾಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಐಪಿಎಲ್ 15ನೇ ಸೀಸನ್ ನಲ್ಲಿ ಇಲ್ಲಿಯವರೆಗೂ 9 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಆ ಮೂಲಕ ಆರು ಅಂಕಗಳೊಂದಿಗೆ ಒಂಭತ್ತನೇ ಸ್ಥಾನದಲ್ಲಿದೆ. ಇನ್ನುಳಿದ ಐದು ಪಂದ್ಯಗಳಲ್ಲಿ ಗೆದ್ದರೇ ಹದಿನಾರು ಅಂಕಗಳನ್ನು ಪಡೆದುಕೊಳ್ಳಲಿದೆ.

ನೆಟ್ ರನ್ ರೇಟ್ ಕೂಡ ಚೆನ್ನಾಗಿದ್ದರೇ ಪ್ಲೇ ಆಫ್ಸ್ ಪ್ರವೇಶಿಸುವ ಸಾಧ್ಯತೆಗಳಿರುತ್ತವೆ.  ಆದಾಗ್ಯೂ, ಗುಜರಾತ್ ಟೈಟಾನ್ಸ್ ಈಗಾಗಲೇ 16 ಅಂಕಗಳನ್ನು ಗಳಿಸಿದ್ದು, ಲಕ್ನೋ ಸೂಪರ್ ಜೈಂಟ್ಸ್ 14 ಅಂಕಗಳೊಂದಿಗೆ, ರಾಜಸ್ಥಾನ ರಾಯಲ್ಸ್ 12 ಮತ್ತು ಸನ್ ರೈಸರ್ಸ್ ಹೈದರಾಬಾದ್ 10 ಅಂಕಗಳೊಂದಿಗೆ ಅಗ್ರ-4ರಲ್ಲಿವೆ.

ಈ ಹಿನ್ನೆಲೆಯಲ್ಲಿ ಚೆನ್ನೈ ಐದು ಪಂದ್ಯಗಳಲ್ಲಿ ಐದರಲ್ಲಿ ಭಾರಿ ಅಂತರದಿಂದ ಗೆದ್ದರೂ ಪ್ಲೇ ಆಫ್ ತಲುಪಲು ಇತರೆ ತಂಡಗಳ ಗೆಲುವಿನ ಮೇಲೆ ಅವಲಂಬಿತವಾಗಿದೆ.  

ipl-2022-virender-sehwag-feels-csk-can-qualify-playoffs

Tags: #Saaksha TVCricketcskipl 2022MS Dhoni
ShareTweetSendShare
Join us on:

Related Posts

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ

by Shwetha
March 27, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

ವಾಹನ ನೋಂದಣಿ ತೆರಿಗೆ ಇಳಿಕೆ: ತಿದ್ದುಪಡಿ ವಿಧೇಯಕ ಅಂಗೀಕಾರ

by Shwetha
March 27, 2026
0

ರಾಜ್ಯದಲ್ಲಿ ವಾಹನ ನೋಂದಣಿ ತೆರಿಗೆಯನ್ನು ಇಳಿಸುವ ಮಹತ್ವದ ತಿದ್ದುಪಡಿ ವಿಧೇಯಕ ಅಂಗೀಕರಿಸಲಾಗಿದೆ. ಈ ಮೂಲಕ 2026-27ನೇ ಸಾಲಿನಲ್ಲಿ ಹೊಸ ವಾಹನಗಳ ನೋಂದಣಿಯಿಂದ ಸುಮಾರು ₹250 ಕೋಟಿ ಆದಾಯ...

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

ವಿಧಾನಸೌಧದಲ್ಲಿ ಐಪಿಎಲ್ ಗದ್ದಲ: ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲ್ಲ! ಆರ್​ಸಿಬಿ ಟಿಕೆಟ್​ಗಾಗಿ ಪಟ್ಟು ಹಿಡಿದ ಶಾಸಕರು

by Shwetha
March 27, 2026
0

ಬೆಂಗಳೂರು: ರಾಜ್ಯದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದ್ದು, ಈ ಬಿಸಿಯು ಈಗ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧಕ್ಕೂ ವ್ಯಾಪಿಸಿದೆ. ಅಭಿಮಾನಿಗಳು ಟಿಕೆಟ್‌ಗಾಗಿ ಕ್ರೀಡಾಂಗಣದ ಹೊರಗೆ ಮತ್ತು ಆನ್‌ಲೈನ್‌ನಲ್ಲಿ...

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

ಬ್ರೋಕನ್ ಪಾಕಿಸ್ತಾನ ಇಂದು ಬ್ರೋಕರ್ ಆಗಲು ಮೋದಿಯೇ ಕಾರಣ ಎಂದು ಕಾಂಗ್ರೆಸ್ ತೀವ್ರ ವಾಗ್ದಾಳಿ

by Shwetha
March 27, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ಮತ್ತು ರಾಜತಾಂತ್ರಿಕ ವೈಫಲ್ಯಗಳಿಂದಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸ್ಥಿರವಾಗಿದ್ದ ಪಾಕಿಸ್ತಾನವು ಇಂದು ಜಾಗತಿಕ...

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

ಮುಖ್ಯಮಂತ್ರಿಗಳ ಸಂಧಾನಕ್ಕೂ ಜಗ್ಗದ ಸಾದಿಕ್ ಅಖಾಡದಲ್ಲೇ ಉಳಿದ ಪೈಲ್ವಾನ್ : ಕೈ ಪಾಳೆಯದಲ್ಲಿ ನಡುಕ ಶುರು

by Shwetha
March 27, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಶಕಗಳಿಂದ ಶಾಮನೂರು ಕುಟುಂಬದ ಭದ್ರಕೋಟೆಯಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈಗ ಬಂಡಾಯದ ಬಿರುಗಾಳಿ ಎದ್ದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram