ಐಪಿಎಲ್ ನಲ್ಲಿ ಬ್ರಾವೋ ಹೊಸ ಚರಿತ್ರೆ
ಐಪಿಎಲ್‌ನಲ್ಲಿ ಸಿಎಸ್‌ಕೆ ಆಲ್‌ರೌಂಡರ್ ಡ್ವೇನ್ ಬ್ರಾವೋ ಇತಿಹಾಸ ನಿರ್ಮಿಸಿದ್ದಾರೆ.
KKR ವಿರುದ್ಧದ IPL 2022 ಸೀಸನ್‌ನ ಆರಂಭಿಕ ಪಂದ್ಯದಲ್ಲಿ ಸ್ಯಾಮ್ ಬಿಲ್ಲಿಂಗ್ಸ್ ಅವರನ್ನು ಔಟ್ ಮಾಡುವ ಮೂಲಕ ಐಪಿಎಲ್ ನಲ್ಲಿ ಬ್ರಾವೋ 170 ನೇ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಈ ಮೂಲಕ ಲಸಿತ್ ಮಾಲಿಂಗ ಜೊತೆಗೆ ಐಪಿಎಲ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ಅಮಿತ್ ಮಿಶ್ರಾ 160 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಪಿಯೂಷ್ ಚಾವ್ಲಾ 157 ವಿಕೆಟ್‌ಗಳೊಂದಿಗೆ ಮೂರನೇ ಮತ್ತು ಹರ್ಭಜನ್ ಸಿಂಗ್ 150 ವಿಕೆಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಬ್ರಾವೋ ಮತ್ತೊಂದು ವಿಕೆಟ್ ಪಡೆದರೆ ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲಿದ್ದಾರೆ.
ಇನ್ನು ಪಂದ್ಯದ ವಿಚಾರಕ್ಕೆ ಬಂದರೆ 15ನೇ ಆವೃತ್ತಿಯ ಐಪಿಎಲ್ ನಲ್ಲಿ ಕೆಕೆಆರ್ ಶುಭಾರಂಭ ಮಾಡಿದೆ.
ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಆರು ವಿಕೆಟ್‌ಗಳ ಜಯ ಸಾಧಿಸಿದೆ. ipl-2022-wayne-bravo-highest-wicket-taker