IPL 2023 : ಡೇವಿಡ್ ವಾರ್ನರ್ ಹೆಗಲಿಗೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವದ ಜವಾಬ್ದಾರಿ
ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಅವರನ್ನ ಐಪಿಎಲ್ 2023ರ ಆವೃತ್ತಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ಆಗಿ ನೇಮಕ ಮಾಡಲಾಗಿದೆ.
ಐಪಿಎಲ್ ಟೂರ್ನಿಯ ಅತ್ಯಂತ ಶ್ರೇಷ್ಠ ಆಟಗಾರನಾಗಿ ವಾರ್ನರ್ ತಮ್ಮ ಛಾಪು ಮೂಡಿಸಿದ್ದು, ಅಪಘಾತದಲ್ಲಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್‌ನಿಂದ ಹೊರಗುಳಿದಿರುವ ರಿಷಬ್ ಪಂತ್ ಅವರ ಅನುಪಸ್ಥಿತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವದ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಈಗಾಗಲೇ ಪ್ರಸಕ್ತ ಸೀಸನ್‌ಗೆ ಸಜ್ಜಾಗುತ್ತಿದ್ದು, ಇದೀಗ ಹೊಸ ಕ್ಯಾಪ್ಟನ್ ಜೊತೆಗೆ ಹೊಸ ವಿಶ್ವಾಸದಿಂದ ಕಣಕ್ಕಿಳಿಯಲಿದೆ.
ಡೇವಿಡ್ ವಾರ್ನರ್ ಐಪಿಎಲ್‌ನಲ್ಲಿ ತಮ್ಮದೇ ಪ್ರಾಬಲ್ಯ ಹೊಂದಿದ್ದಾರೆ. ಐಪಿಎಲ್‌ನಲ್ಲಿ ಈ ಹಿಂದೆ ಮೊದಲು ಸನ್‌ರೈಸರ್ಸ್ ಹೈದ್ರಾಬಾದ್ ತಂಡವನ್ನ ಮುನ್ನಡೆಸಿದ್ದ ವಾರ್ನರ್, 2016ರಲ್ಲಿ ಎಸ್‌ಆರ್‌ಎಚ್ ತಂಡಕ್ಕೆ ಪ್ರಶಸ್ತಿ ತಂದುಕೊಡುವಲ್ಲಿ ಯಶಸ್ವಿಯಾಗಿದ್ದರು.
ಐಪಿಎಲ್ ಟೂರ್ನಿಯಲ್ಲಿ ಈವರೆಗೂ 155 ಪಂದ್ಯಗಳನ್ನ ಆಡಿರುವ ವಾರ್ನರ್, 140.58ರ ಸ್ಟ್ರೈಕ್ ರೇಟ್‌ನಲ್ಲಿ 5668 ರನ್ ಗಳಿಸಿದ್ದಾರೆ.
ಡೇವಿಡ್ ವಾರ್ನರ್ ಅವರೊಂದಿಗೆ ಟೀಂ ಇಂಡಿಯಾದ ಆಲ್ರೌಂಡರ್ ಅಕ್ಸರ್ ಪಟೇಲ್, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಉಪ ನಾಯಕನಾಗಿ ನಿಯೋಜನೆಗೊಂಡಿದ್ದಾರೆ.
ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ಅಕ್ಸರ್ ಪಟೇಲ್, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿದ್ದಾರೆ.
IPL 2023 : David Warner shoulders responsibility of captaining Delhi Capitals