ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ಇತಿಹಾಸದಲ್ಲಿಯೇ ಅತ್ಯಂತ ವೇಗದ ಅರ್ಧಶತಕವನ್ನು ರಾಜಸ್ಥಾನದ ಯುವ ಆಠಗಾರ ಯಶಸ್ವಿ ಜೈಸ್ವಾಲ್ ಸಿಡಿಸಿದ್ದಾರೆ. ಹೀಗಾಗಿ ಜೈಸ್ವಾಲ್ ರನ್ನು ಕಿಂಗ್ ಕೊಹ್ಲಿ ಮುಕ್ತ ಕಂಠದಿಂದ ಹೊಗಳಿದ್ದಾರೆ.
ಕೆಕೆಆರ್ ನೀಡಿದ್ದ 150 ರನ್ ಗುರಿ ಹಿಂಬಾಲಿಸಿದ ರಾಜಸ್ಥಾನ್ ರಾಯಲ್ಸ್ ಪರ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಈ ಹಿಂದೆ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಕೆ.ಎಲ್ ರಾಹುಲ್ ದಾಖಲೆಯನ್ನು ಮುರಿದರು. ಅಂತಿಮವಾಗಿ 47 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್ ಹಾಗೂ 13 ಬೌಂಡರಿಗಳೊಂದಿಗೆ ಅಜೇಯ 98 ರನ್ ಸಿಡಿಸಿದರು. ಹೀಗಾಗಿ 41 ಎಸೆತಗಳು ಬಾಕಿ ಇರುವಾಗಲೇ ರಾಜಸ್ಥಾನ್ ರಾಯಲ್ಸ್ ತಂಡದ 9 ವಿಕೆಟ್ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದರು ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಪಂದ್ಯದ ಮುಗಿದ ನಂತರ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ನಾನು ವೀಕ್ಷಿಸಿದ ಅತ್ಯುತ್ತಮ ಬ್ಯಾಟಿಂಗ್ ಇದಾಗಿದೆ ಎಂದು ಶ್ಲಾಘಿಸಿದ್ದಾರೆ. ವಿರಾಟ್ ಕೊಹ್ಲಿ ಜೊತೆಗೆ ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವು ಮಾಜಿ ಹಾಲಿ ಕ್ರಿಕೆಟಿಗರು ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.
ವಾವ್ಹ್.! ಈ ಸಂದರ್ಭದಲ್ಲಿ ನಾನು ನೋಡಿದ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ಇದಾಗಿದೆ. ಎಂಥಾ ಅದ್ಭುತ ಪ್ರತಿಭೆ. ಯಶಸ್ವಿ ಜೈಸ್ವಾಲ್,” ಎಂದು ವಿರಾಟ್ ಕೊಹ್ಲಿ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಅವರು ಕೂಡ ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಪ್ರದರ್ಶನವನ್ನು ಶ್ಲಾಘಿಸಿದರು. “ವಿಶೇಷ ಬ್ಯಾಟಿಂಗ್. ವಿಶೇಷ ಆಟಗಾರ,” ಎಂದು ಸೂರ್ಯ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಯುವ ಆಟಗಾರನ ವಿಶ್ವಸವನ್ನು ಹೆಚ್ಚಿಸಿದ್ದಾರೆ.