IPL 2023 : ಐಪಿಎಲ್ ಇತಿಹಾಸದಲ್ಲಿ ದುಬಾರಿ ಆಟಗಾರರು ಇವರು….
ಮೊನ್ನೆ ಕೇರಳದ ಕೊಚ್ಚಿಯಲ್ಲಿ ನಡೆದ ಐಪಿಎಲ್ ಮಿನಿ ಹರಾಜು ಹಲವಾರು ಅಚ್ಚರಿಗಳನ್ನ ನೀಡಿದೆ. ಇಂಗ್ಲೆಂಡ್ ಆಲ್ರೌಂಡರ್ ಸ್ಯಾಮ್ ಕರನ್ ದಾಖಲೆಯ ಮೊತ್ತಕ್ಕೆ ಸೇಲ್ ಆಗಿ ಅಚ್ಚರಿ ನೀಡಿದ್ದಾರೆ. ಇತ್ತೀಚಿನ ಐಪಿಎಲ್ ಹರಾಜಿನಲ್ಲಿ ದಾಖಲೆಯ ಮೊತ್ತಕ್ಕೆ ಮಾರಾಟವಾದ ಆಟಗಾರರು ಯಾರು ? ಭಾರೀ ಮೊತ್ತಕ್ಕೆ ರಿಟೈನ್ ಆದ ಆಟಗಾರರು ಯಾರು ? ಎನ್ನುವ ಡೀಟೆಲ್ಸ್ ಇಲ್ಲಿದೆ.
ಐಪಿಎಲ್ ಇತಿಹಾಸದಲ್ಲಿ ಇಂಗ್ಲೆಂಡ್ ಆಲ್ರೌಂಡರ್ ಸ್ಯಾಮ್ ಕರ್ರನ್ ದಾಖಲೆ ಬೆಲೆಗೆ ಮಾರಾಟವಾದ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ಬಾರಿಯ ಹರಾಜಿನಲ್ಲಿ 18.50 ಕೋಟಿ ರೂ.ಗೆ ಪಂಜಾಬ್ ಫ್ರಾಂಚೈಸಿ ಖರೀದಿಸಿದೆ. ಆಸ್ಟ್ರೇಲಿಯಾ ಆಲ್ರೌಂಡರ್ ಕ್ಯಾಮರಾನ್ ಗ್ರೀನ್ 17.25 ಕೋಟಿ ರೂ,ಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. 2018ರಲ್ಲಿ ವಿರಾಟ್ ಕೊಹ್ಲಿ ಅವರನ್ನು ಆರ್ಸಿಬಿ 17 ಕೋಟಿ ರೂ.ಗೆ ಅವರನ್ನು ರಿಟೈನ್ ಮಾಡಿಕೊಂಡಿತ್ತು. ನಂತರ 2019ರಲ್ಲೂ ಆರ್ಸಿಬಿ 17 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿತ್ತು. 2020ರಲ್ಲೂ ವಿರಾಟ್ ಅವರನ್ನು 17 ಕೋಟಿ ರೂ.ಗೆ ರಿಟೈನ್ 2021ರಲ್ಲೂ ರಿಟೈನ್ ಮಾಡಿಕೊಂಡಿತ್ತು. ಕನ್ನಡಿಗ ಕೆ.ಎಲ್.ರಾಹುಲ್ 2022ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ 17 ಕೋಟಿ ರೂ,ಗೆ ಖರೀದಿ ಮಾಡಿತ್ತು.
IPL 2023 : These are the most expensive players in IPL history….








