ಜೆಡ್ಡಾ: 2025ರ ಐಪಿಎಲ್ ಆವೃತ್ತಿಯ ಆಟಗಾರರ ಮೆಗಾ ಹರಾಜು (IPL Mega Auction) ಇಂದು ಆರಂಭವಾಗಲಿದೆ. ಇಂದು (ನ.24) ಮತ್ತು ನಾಳೆ (ನ.25) ಹರಾಜು ಪ್ರಕ್ರಿಯೆ ನಡೆಯಲಿದೆ.
ಒಂದು ಫ್ರಾಂಚೈಸಿ ಕನಿಷ್ಠ 18 ರಿಂದ 25 ಆಟಗಾರರನ್ನು ಒಳಗೊಳ್ಳಬಹುದಾಗಿದ್ದು, ಒಟ್ಟು 577 ಆಟಗಾರರು ಹರಾಜಿನ ಕಣದಲ್ಲಿದ್ದಾರೆ. 10 ಐಪಿಎಲ್ ತಂಡಗಳು ಒಟ್ಟು 641.5 ಕೋಟಿ ರೂ. ಹಣವನ್ನು ಹರಾಜಿನಲ್ಲಿ ಖರ್ಚು ಮಾಡಲಿವೆ.
204 ಜನ ಆಟಗಾರರನ್ನು ಖರೀದಿಸುವ ಸಾಧ್ಯತೆ ಇದೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ಗಳಾದ ಕೆ.ಎಲ್. ರಾಹುಲ್, ರಿಷಬ್ ಪಂತ್ (Rishabh Pant), ತ್ತು ಶ್ರೇಯಸ್ ಅಯ್ಯರ್ ಹೆಚ್ಚಿನ ಮೊತ್ತಕ್ಕೆ ಹರಾಜಾಗುವ ಸಾಧ್ಯತೆ ದಟ್ಟವಾಗಿದೆ.
ರಿಷಬ್ ಪಂತ್ ರನ್ನು ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ಕೆ.ಎಲ್ ರಾಹುಲ್ರನ್ನ ಆರ್ಸಿಬಿ (RCB) ಖರೀದಿಸುವ ಪ್ರಯತ್ನ ನಡೆದಿದೆ.
ಅಲ್ಲದೇ ಈ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕೆ.ಎಲ್ ರಾಹುಲ್, ದೇವದತ್ ಪಡಿಕ್ಕಲ್, ಮನೀಶ್ ಪಾಂಡೆ, ಮಯಾಂಕ್ ಅಗರ್ವಾಲ್, ಪ್ರಸಿದ್ಧ ಕೃಷ್ಣ, ಲುತ್ ಸಿಸೋಡಿಯಾ, ಆರ್.ಸ್ಮರಣ್, ಎಲ್.ಆರ್ ಚೇತನ್, ಮನೋಜ್ ಭಾಂಡಗೆ, ಅಭಿಲಾಶ್ ಶೆಟ್ಟಿ, ವೈಶಾಖ್ ವಿಜಯ್ ಕುಮಾರ್, ಪ್ರವೀಣ್ ದುಬೆ, ಮನ್ವಂತ್ ಕುಮಾರ್, ಕೆ.ಗೌತಮ್, ಶ್ರೇಯಸ್ ಗೋಪಾಲ್, ಹಾರ್ದಿಕ್ ರಾಜ್, ಅಭಿನವ್ ಮಹೋಹರ್, ಬಿ.ಆರ್ ಶರತ್, ಕೃಷ್ಣನ್ ಶ್ರೀಜಿತ್, ವಿದ್ವತ್ ಕಾವೇರಪ್ಪ ಸೇರಿದಂತೆ ಇನ್ನೂ ಕೆಲವರು ಇದ್ದಾರೆ.
ಕೆ.ಎಲ್ ರಾಹುಲ್ ಹಾಗೂ ಪಂತ್ ಅವರಲ್ಲಿ ಯಾರು ಹೆಚ್ಚು ಹಣಕ್ಕೆ ಸೇಲ್ ಆಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.








