IPL | ಡಿಸೆಂಬರ್ 16 ಕ್ಕೆ ಬೆಂಗಳೂರಿನಲ್ಲಿ ಐಪಿಎಲ್ ಮಿನಿ ಆಕ್ಷನ್
ಐಪಿಎಲ್ ಪ್ರಿಯರಿಗೆ ಬಿಸಿಸಿಐ ಗುಡ್ ನ್ಯೂಸ್ ಕೊಟ್ಟಿದ್ದು, ಐಪಿಎಲ್ ಸೀಸನ್ 16ರ ಮಿನಿ ಆಕ್ಷನ್ ಡಿಸೆಂಬರ್ 16 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ಮುಂದಿನ ತಿಂಗಳ ಅಂತ್ಯದೊಳಗೆ ರಿಟೇನ್ಡ್ ಆಟಗಾರರ ಪಟ್ಟಿಯನ್ನು ರಿಲೀಸ್ ಮಾಡಬೇಕಾಗಿದೆ.
2018ರಲ್ಲಿ ಮೊದಲ ಬಾರಿಗೆ ಎರಡು ಬಾರಿ ಐಪಿಎಲ್ ಹರಾಜು ಪ್ರಕ್ರಿಯೆ ನಡೆದಿತ್ತು.

ಇದೀಗ ಬಿಸಿಸಿಐ ಎರಡನೇ ಬಾರಿಗೆ ಒಂದೇ ವರ್ಷದಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ.
ಮುಂದಿನ ವರ್ಷ ಮಾರ್ಚ್ ವೇಳೆ ಐಪಿಎಲ್ ಸೀಸನ್ 16 ಆರಂಭವಾಗಲಿದೆ.
ಈ ಬಾರಿ ಮಿನಿ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಸನ್ ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್, ಲಖನೌ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಭಾಗಿಯಾಗಲಿವೆ.