IPL | ಐಪಿಎಲ್ ನಲ್ಲಿ ಅಬ್ಬರಿಸಿದ ಗಬ್ಬರ್ ಗಿಲ್ಲ ಟೀಂ ಇಂಡಿಯಾದಲ್ಲಿ ಸ್ಥಾನ..!
ಟೀಂ ಇಂಡಿಯಾದ ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ವಿಚಾರದಲ್ಲಿ ಆಯ್ಕೆಗಾರರು ಮತ್ತೊಮ್ಮೆ ಅನ್ಯಾಯ ಮಾಡಿದ್ದಾರೆ.
ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡಕ್ಕಾಗಿ ಆಯ್ಕೆ ಸಮಿತಿ ಶಿಖರ್ ಧವನ್ ಅವರನ್ನು ಕಡೆಗಣಿಸಿದೆ.
ಆದರೆ, ಐಪಿಎಲ್ – 2022 ರಲ್ಲಿ ಅಮೋಘ ಪ್ರದರ್ಶನ ನೀಡಿದ ಧವನ್ ಗೆ ಸ್ಥಾನ ನೀಡದಿದ್ದಕ್ಕೆ ನೆಟ್ಟಿಗರು ಆಯ್ಕೆ ಸಮಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವರ್ಷದ ಐಪಿಎಲ್ ಋತುವಿನಲ್ಲಿ 13 ಪಂದ್ಯಗಳನ್ನು ಆಡಿರುವ ಧವನ್ 421 ರನ್ ಗಳಿಸಿ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.

ಬಿಸಿಸಿಐ ಭಾನುವಾರ ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ.
ಈ ತಂಡದಲ್ಲಿ ಎಸ್‌ಆರ್‌ಎಚ್ ವೇಗಿ ಉಮ್ರಾನ್ ಮಲಿಕ್ ಮತ್ತು ಪಂಜಾಬ್ ವೇಗಿ ಅರ್ಷದೀಪ್ ಸಿಂಗ್ ಸ್ಥಾನ ಪಡೆದಿದ್ದಾರೆ.
ಅದೇ ರೀತಿ ಅನುಭವಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ತಂಡಕ್ಕೆ ಮರಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ : ಕೆಎಲ್ ರಾಹುಲ್ (ನಾಯಕ), ರಿಷಬ್ ಪಂತ್ (ಉಪನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್‌ವಾಡ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್. ipl-shikhar-dhawan-bcci-selection-committee-trolled