ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಇಲ್ಲಿಯವರೆಗೆ 15 ಪಂದ್ಯಗಳು ಮುಕ್ತಾಯವಾಗಿವೆ. ಹೀಗಾಗಿ ಅಂಕಪಟ್ಟಿಯಲ್ಲಿ ಬದಲಾವಣೆಗಳು ಆಗುತ್ತಿವೆ.
ಈ ಬಾರಿ ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ಲಾಸ್ಟ್ ನಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡವು ಇದುವರೆಗೆ ಮೂರು ಪಂದ್ಯಗಳನ್ನಾಡಿದ್ದು, ಮೂರು ಮ್ಯಾಚ್ನಲ್ಲೂ ಜಯ ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿರುವ 2 ಪಂದ್ಯಗಳಲ್ಲೂ ಜಯ ಸಾಧಿಸಿರುವ ಕೆಕೆಆರ್ ತಂಡವು ಒಟ್ಟು 4 ಅಂಕ ಹೊಂದಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರು ಪಂದ್ಯಗಳಲ್ಲಿ 2 ಜಯ ಹಾಗೂ 1 ಸೋಲಿನೊಂದಿಗೆ ಮೂರನೇ ಸ್ಥಾನದಲ್ಲಿದೆ. ಒಟ್ಟು 4 ಅಂಕ ಹೊಂದಿರುವ ಸಿಎಸ್ ಕೆ ಮೇಲೆ ಬರುವ ಉತ್ಸಾಹದಲ್ಲಿದೆ.
ಆರ್ಸಿಬಿ ವಿರುದ್ಧ ಜಯ ಸಾಧಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿತ ಕಂಡಿದೆ. ಆಡಿರುವ ಮೂರು ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 4 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಗುಜರಾತ್ ಟೈಟಾನ್ಸ್ ತಂಡವು ಮೂರು ಪಂದ್ಯ ಆಡಿದ್ದು, ಎರಡರಲ್ಲಿ ಜಯ ಸಾಧಿಸಿದೆ. ಈಗ ಗುಜರಾತ್ ಟೈಟಾನ್ಸ್ ತಂಡವು 4 ಅಂಕಗಳನ್ನು ಹೊಂದಿದ್ದು, ಈ ಮೂಲಕ ಐದನೇ ಸ್ಥಾನದಲ್ಲಿದೆ.
ಸನ್ರೈಸರ್ಸ್ ಹೈದರಾಬಾದ್ ತಂಡವು 3 ಪಂದ್ಯಗಳಲ್ಲಿ 1 ಜಯ ಸಾಧಿಸಿದ್ದು, ಇದೀಗ 2 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಮೂರು ಪಂದ್ಯಗಳಲ್ಲಿ ಒಂದು ಗೆಲುವು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ 2 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ 7ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ ಮೂರು ಪಂದ್ಯಗಳಲ್ಲಿ 1 ಗೆಲುವು ಸಾಧಿಸಿ 2 ಅಂಕಗಳನ್ನು ಸಂಪಾದಿಸಿದೆ. ಲಕ್ನೋ ಸೂಪರ್ ಜೈಂಟ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 9ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಮಾತ್ರ ಗೆದ್ದಿರುವ ಆರ್ಸಿಬಿ 2 ಅಂಕ ಮಾತ್ರ ಹೊಂದಿದೆ. ಆಡಿರುವ ಮೂರು ಪಂದ್ಯಗಳಲ್ಲಿಯೂ ಸೋಲು ಕಂಡಿರುವ ಮುಂಬೈ ತಂಡ ಕೊನೆಯ ಸ್ಥಾನದಲ್ಲಿಯೇ ಉಳಿದುಕೊಂಡಿದೆ.