ದೆಹಲಿ ಹಿಂಸಾಚಾರ ಖಂಡಿಸಿ ಇರಾನ್ ವಿದೇಶಾಂಗ ಸಚಿವ ಜಾವೇದ್ ಜರೀಫ್ ಟ್ವೀಟ್ ಮಾಡಿದ್ದು, ಜಾವೇದ್ ನಡೆಯನ್ನು ತೀವ್ರವಾಗಿ ಖಂಡಿಸಿರುವ ಭಾರತ, ಈ ಕುರಿತು ಸ್ಪಷ್ಟನೆ ನೀಡುವಂತೆ ಇರಾನ್ ರಾಯಭಾರಿ ಅಲಿ ಚೆಗೆನಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಕುರಿತು ಟ್ವೀಟ್ ಮಾಡಿದ್ದ ಜಾವೇದ್ ಜರೀಫ್, ಹಿಂಸಾಚಾರ ಹತ್ತಿಕ್ಕುವಂತೆ ಭಾರತ ಸರ್ಕಾರಕ್ಕೆ ಸಲಹೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್, ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸದಂತೆ ಇರಾನ್ ಸೇರಿ ಎಲ್ಲ ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಇರಾನ್ ರಾಯಭಾರಿ ಅಲಿ ಚೆಗೆನಿ ಅವರಿಗೆ ನೋಟಿಸ್ ಜಾರಿ ಮಾಡಿರುವ ಭಾರತದ ವಿದೇಶಾಂಗ ಇಲಾಖೆ, ಈ ಕುರಿತು ಸ್ಪಷ್ಟನೆ ನೀಡುವಂತೆ ಕೋರಿದೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








