ಗಂಡನ ಮನೆಯಲ್ಲಿ ಶೌಚಾಲಯವಿಲ್ಲವೆಂದು ನೇಣಿಗೆ ಕೊರಳೊಡ್ಡಿದ ಮಹಿಳೆ…
ತನ್ನ ಗಂಡನ ಮನೆಯಲ್ಲಿ ಶೌಚಾಲಯವಿಲ್ಲವೆಂದು ಮನನೊಂದ 27 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ.
ಕಡಲೂರು ಜಿಲ್ಲೆಯ ಅರಿಸಿಪೆರಿಯಂಕುಪ್ಪಂ ಗ್ರಾಮದವರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರಮ್ಯಾ ಏಪ್ರಿಲ್ 6 ರಂದು ಕಾರ್ತಿಕೇಯನ್ ಅವರನ್ನು ವಿವಾಹವಾಗಿದ್ದರು. ಮೂಲಗಳ ಪ್ರಕಾರ, ರಮ್ಯಾ ತನ್ನ ಗಂಡನ ಮನೆಯಲ್ಲಿ ಶೌಚಾಲಯವಿಲ್ಲದ ಕಾರಣ ಮದುವೆಯ ನಂತರ ತನ್ನ ತಾಯಿಯೊಂದಿಗೆ ವಾಸವಾಗಿದ್ದಳು.
ರಾಜ್ಯದ ರಾಜಧಾನಿಯಿಂದ ಚೆನೈನಿಂದ ಸುಮಾರು 4 ಗಂಟೆಗಳ ದೂರದಲ್ಲಿರುವ ಕಡಲೂರು ನಗರದಲ್ಲಿ ಶೌಚಾಲಯವಿರುವ ಮನೆಯನ್ನು ಹುಡುಕುವಂತೆ ರಮ್ಯ ಕಾರ್ತಿಕೇಯನ್ ಅವರನ್ನ ಕೇಳಿದ್ದಳು, ಇದು ಅವರ ನಡುವೆ ಪದೇ ಪದೇ ಜಗಳಕ್ಕೆ ಕಾರಣವಾಗಿತ್ತು.
ಸೋಮವಾರ, ರಮ್ಯಾ ಮನೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನ ತಾಯಿ ಕಂಡಿದ್ದಾರೆ. ಕೂಡಲೇ ಆಕೆಯನ್ನು ಕಡಲೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ರಮ್ಯಾ ಅವರನ್ನು ಪಾಂಡಿಚೇರಿಯ ಜವಾಹರಲಾಲ್ ಇನ್‌ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಎಜುಕೇಶನ್ ಅಂಡ್ ರಿಸರ್ಚ್ (ಜಿಪ್‌ಮರ್) ಗೆ ಸ್ಥಳಾಂತರಿಸಲಾಯಿತು, ಆದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ರಮ್ಯಾಳ ತಾಯಿ ಮಂಜುಳಾ ತಿರುಪತಿರುಪುಲಿಯೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.








