ಮಂಗಳೂರಲ್ಲಿರೋದು ಬಿಜೆಪಿ ಸರ್ಕಾರನಾ..? ತಾಲಿಬಾನ್‍ಗಳದ್ದಾ..? : ಸಿದ್ದರಾಮಯ್ಯ

1 min read
Siddaramaiah saaksha tv

ಮಂಗಳೂರಲ್ಲಿರೋದು ಬಿಜೆಪಿ ಸರ್ಕಾರನಾ..? ತಾಲಿಬಾನ್‍ಗಳದ್ದಾ..? : ಸಿದ್ದರಾಮಯ್ಯ Siddaramaiah saaksha tv

ಮಂಗಳೂರು : ಅನ್ಯಕೋಮಿನ ಯುವಕ-ಯುವತಿ ಒಂದೇ ಕಾರಿನಲ್ಲಿ ಚಲಿಸುತ್ತಿದ್ದ ಕಾರಣಕ್ಕೆ ಯುವಕರ ಗಂಪೊಂದು ಕಾರು ಅಡ್ಡಗಟ್ಟಿ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ, ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.

ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ, ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ..? ತಾಲಿಬಾನ್ ಗಳದ್ದಾ..? ಎಂದು ಪ್ರಶ್ನಿಸಿದ್ದಾರೆ.

Siddaramaiah saaksha tv

ಹಿನ್ನೆಲೆ
ಮಂಗಳೂರು ಹೊರವಲಯದ ಸುರತ್ಕಲ್ ಬಳಿ ಮಲ್ಪೆ ಬೀಚ್ ಗೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ಅನ್ಯಕೋಮಿನ ವಿದ್ಯಾರ್ಥಿಗಳು ಎಂಬ ಕಾರಣಕ್ಕೆ ಹಿಂದೂ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆ. ಇದೇ ವೇಳೆ ಸ್ಥಳದಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಶರೀಫ್ ಕಾರಿನ ಮೇಲೆ ಆಗುತ್ತಿದ್ದ ದಾಳಿಯನ್ನು ತಡೆಯಲು ಯತ್ನಿಸಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನು ಈ ಪ್ರಕರಣದ ಸಂಬಂಧ ಹಲ್ಲೆ ನಡೆಸಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd