ಬೆಂಗಳೂರು : ವಿಶ್ವವನ್ನೇ ತಲ್ಲಣಗೊಳಿಸಿರುವ ಹೆಮ್ಮಾರಿ ಕೊರೊನಾ ವೈರಸ್ ಸೋಂಕಿನಿಂದಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ದಾವೂದ್ ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿರುವುದಾಗಿ ಮಾಧ್ಯಮವೊಂದು ಟ್ವಿಟ್ಟರ್ ನಲ್ಲಿ ಪ್ರಕಟಿಸಿಕೊಂಡಿದೆ.
ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿ ಮೆಹಜಬೀನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಅವರನ್ನು ಕರಾಚಿಯಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
https://twitter.com/NewsX/status/1269135532925173762
ದಾವೂದ್ ಇಬ್ರಾಹಿಂಗೆ ಮೊದಲು ಕೊರೊನಾ ಸೋಂಕು ಪತ್ತೆಯಾಗಿದ್ದು, ನಂತರ ಆತನ ಪತ್ನಿಯಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದೆ. ನಂತರ ಆಕೆಯನ್ನು ಪರೀಕ್ಷೆಗೆ ಒಳಪಡಿಸಿದಾಗ ಆಕೆಯಲ್ಲೂ ಕೊರೊನಾ ಸೋಂಕು ಪತ್ತೆಯಾಗಿದೆ. ದಾವೂದ್ ಮತ್ತು ಆತನ ಪತ್ನಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತನ ಮನೆಯಲ್ಲಿ ಕೆಲಸ ಮಾಡುವ ಮನೆ ಕೆಲಸಗಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಕ್ವಾರಂಟೈನ್ ಮಾಡಲಾಗಿದೆ ಎಂದು ಮೂಲಗಳು ಹೇಳಿದೆ. ಸದ್ಯ ಕೊರೊನಾ ವೈರಸ್ ಗೆ ದಾವೂದ್ ಇಬ್ರಾಹಿಂ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದ್ದು, ಇದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಂಗ್ಯದ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
1993ರಲ್ಲಿ ನಡೆದ ಮುಂಬೈ ಸರಣಿ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಪಾತಕಿಗಳಲ್ಲಿ ದಾವೂದ್ ಇಬ್ರಾಹಿಂ ಒಬ್ಬ. ದಾವೂದ್ ಕರಾಚಿಯಲ್ಲಿ ವಾಸಿಸುತ್ತಾನೆಂದು ಹೇಳಲಾಗುತ್ತದೆಯಾದರೂ ಪಾಕಿಸ್ತಾನ ಸರ್ಕಾರ ಇದನ್ನು ಅಲ್ಲಗಳೆಯುತ್ತಲೇ ಬಂದಿದೆ.








