ಸಮಾಜವನ್ನು ವಿಘಟಿಸುವುದೇ ನಿಮ್ಮ ಕಾಯಕವೇ : ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಿಂದ ಸಂಘಟನೆ ಮಾಡಲು ಮುಂದಾಗಿದ್ದಾರೆ ಎಂಬ ಸುದ್ದಿ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರವಾಗಿ ರಾಜ್ಯ ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿದೆ.
ಟ್ವಿಟ್ಟರ್ ನಲ್ಲಿ ಬಿಜೆಪಿ, ಮಾನ್ಯ ಸಿದ್ದರಾಮಯ್ಯ ಅವರೇ, 2013 ರಲ್ಲಿ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತರಾಗಿದ್ದ, ತಮ್ಮದೇ ಪಕ್ಷದ ದಲಿತ ನಾಯಕ ಪರಮೇಶ್ವರ್ ಅವರನ್ನು ಉಪಾಯದಿಂದ ಸೋಲಿಸಿ ಮುಖ್ಯಮಂತ್ರಿ ಪದವಿಯಿಂದ ದೂರ ಸರಿಸಿದಿರಿ. ಉಪಮುಖ್ಯಮಂತ್ರಿಯಾಗಿಯೂ ಮುಂದುವರೆಯಲು ಬಿಡಲಿಲ್ಲ. ಈಗ ಹಿಂದ ಎಂಬ ನಾಟಕ, ಚೆನ್ನಾಗಿದೆ!
ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಸ್ವಾಭಾವಿಕವಾಗಿ ರಾಜ್ಯದಲ್ಲಿ ಉನ್ನತ ಸ್ಥಾನಮಾನಕ್ಕೆ ಅರ್ಹರಾಗಿದ್ದರೂ, ದಲಿತ ಎಂಬ ಕಾರಣಕ್ಕೆ ಅಡ್ಡಗಾಲು ಹಾಕಿದ್ದು ನೀವೇ ಅಲ್ವೇ ಸಿದ್ದರಾಮಯ್ಯ. ಈಗ ಹಿಂದ ಸಮಾವೇಶದ ಮೂಲಕ ದಲಿತರ ಪರವಾಗಿ ಧ್ವನಿ ಎತ್ತುತ್ತೇನೆ ಎಂದು ನಾಟಕ ಮಾಡುವುದು ಯಾವ ಪುರುಷಾರ್ಥಕ್ಕಾಗಿ?
ಮಾನ್ಯ ಸಿದ್ದರಾಮಯ್ಯ ಅವರೇ, ಈ ಮೊದಲು ಅಹಿಂದ ಎಂದು ಸಂಘಟನೆ ಮಾಡಿ ನಿರ್ದಿಷ್ಟ ಸಮುದಾಯಗಳನ್ನು ಪ್ರತ್ಯೇಕ ಮಾಡಿದಿರಿ. ಈಗ ಅಹಿಂದದಲ್ಲಿ ಅಲ್ಪಸಂಖ್ಯಾತರನ್ನು ಬಿಟ್ಟು ಹಿಂದ ಹೋರಾಟ ಎಂಬ ನಾಟಕ ಮಾಡುತ್ತಿದ್ದೀರಿ. ಜೀವನ ಪಯರ್ಂತ ಸಮಾಜವನ್ನು ವಿಘಟಿಸುವುದೇ ನಿಮ್ಮ ಕಾಯಕವೇ?
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮಾನ್ಯ ಸಿದ್ದರಾಮಯ್ಯ, ಅಧಿಕಾರದಲ್ಲಿದ್ದಾಗ ಲಿಂಗಾಯತ, ವೀರಶೈವ ಎಂಬ ವಿಚಾರವನ್ನು ತಂದು ಧರ್ಮದ ಕಿಚ್ಚು ಹಚ್ಚಿದಿರಿ. ಈಗ ಹಿಂದ ಹೋರಾಟ ಎಂಬ ನಾಟಕ ರಂಗ ಆರಂಭಿಸಿದ್ದೀರಿ.ಈ ನೆಲದಲ್ಲಿ ಸಂತರು, ಶರಣರು, ಸ್ವಾಮೀಜಿಗಳು ಒಗ್ಗಟ್ಟಿನ ಮಂತ್ರ ಸಾರಿದ್ದರೆ, ನೀವು ಮಾತ್ರ ವಿಘಟನೆ, ವಿಂಗಡಣೆಯಲ್ಲಿ ತೊಡಗಿಸಿಕೊಂಡಿದ್ದೀರಿ ಎಂದು ಟೀಕಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel