ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೆಹಲಿ ಒತ್ತಡ ಇಲ್ಲ, ಲಿಂಗಾಯತರು ಒಬಿಸಿಗೆ ಸೇರೋದು ಅಪರಾಧವೇ: ಸಚಿವ ಮಾಧುಸ್ವಾಮಿ ಪ್ರಶ್ನೆ..!

Kariyappa N by Kariyappa N
November 27, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವನ್ನು ಹಿಂದುಳಿದ ಪಟ್ಟಿಗೆ ಸೇರಿಸಿ ಮೀಸಲಾತಿ ನೀಡುವುದು ಮಹಾಪರಾಧವೇ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಪ್ರಶ್ನಿಸಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರಶೈವ-ಲಿಂಗಾಯತ ಸಮುದಾಯಗಳಲ್ಲಿ ನೂರಕ್ಕೂ ಹೆಚ್ಚು ಉಪಜಾತಿಗಳಿವೆ. ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ಕೆಲವು ಉಪಜಾತಿಗಳನ್ನು ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಬೇಕಾಗಿದೆ. ಹೀಗಾಗಿ ಸಮಗ್ರವಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗುತ್ತದೆ. ಆದ್ದರಿಂದ ವಿಷಯ ಪ್ರಸ್ತಾಪ ಮುಂದೂಡಲಾಗಿದೆ ಎಂದು ಮಾಧುಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.

lingayath
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ರದ್ದಾಗಿರುವುದಕ್ಕೆ ಬೇರೆ ಕಾರಣಗಳು ಇಲ್ಲ. ದೆಹಲಿ ನಾಯಕರು ತೀರ್ಮಾನ ಮಾಡಬಾರದೆಂದು ಯಾವುದೇ ಒತ್ತಡ ಹೇರಿಲ್ಲ. ಸಿದ್ಧತೆ ಮಾಡಿಕೊಳ್ಳದ ಕಾರಣ ಮೀಸಲಾತಿ ಪ್ರಸ್ತಾಪ ಮುಂದೂಡುವಂತೆ ಸಿಎಂಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದರು.
ವೀರಶೈವ-ಲಿಂಗಾಯತ, ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿ ನೀಡುವ ಸಂಬಂಧ ಸಾಕಷ್ಟು ಅಧ್ಯಯನ, ಪೂರಕ, ಅಗತ್ಯ ದಾಖಲೆಗಳ ಸಂಗ್ರಹ ಮಾಡಿಕೊಳ್ಳಬೇಕು. ಅಗತ್ಯ ದಾಖಲೆ ಸಿದ್ಧಮಾಡಿಕೊಂಡು ಸಂಪುಟದಲ್ಲಿ ನಿರ್ಣಯ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೇಂದ್ರದ ಉದ್ಯೋಗ ಮತ್ತು ಶೈಕ್ಷಣಿಕ ಮೀಸಲಾತಿ ಉದ್ದೇಶಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ಉದ್ದೇಶಿಸಲಾಗಿತ್ತು. 1999ರಿಂದಲೂ ವೀರಶೈವ ಸಮಾಜ ಹೋರಾಟ ಮಾಡಿಕೊಂಡು ಬಂದಿದೆ. ರಾಜ್ಯದಲ್ಲಿ ಈಗ ಮೀಸಲಾತಿ ಕೇಳುತ್ತಿಲ್ಲ. ಕೇಂದ್ರದ ಕೋಟಾದಲ್ಲಿ ಅವಕಾಶ ಪಡೆಯುವುದಷ್ಟೇ ಉದ್ದೇಶ ಎಂದು ಸಮರ್ಥಿಸಿಕೊಂಡಿದ್ದಾರೆ.
ವೀರಶೈವ ಲಿಂಗಾಯತರು ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಸೇರುವುದು ಮಹಾ ಅಪರಾಧವೇ? ಅವಕಾಶ ಪಡೆದುಕೊಳ್ಳುವುದು ಅಪರಾಧ ಮಾಡಿರುವ ರೀತಿ ಏಕೆ ನೋಡಲಾಗುತ್ತಿದೆ? ಮುಂದುವರಿದ ವರ್ಗದಲ್ಲಿದ್ದು, ಉಪ ಜಾತಿಗಳು ಒಬಿಸಿ ಪಟ್ಟಿಯಿಂದ ಬಿಟ್ಟು ಹೋಗಿದ್ದರೆ ಅವರನ್ನೂ ಸೇರಿಸಿಕೊಂಡು ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

Related posts

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಬೆಂಗಳೂರಿನಲ್ಲಿ ಆಡಳಿತ ದೆಹಲಿಯಲ್ಲಿ ತೀರ್ಮಾನ: ಡಿಕೆಶಿ ಸರ್ಕಾರಕ್ಕೆ ಹೈಕಮಾಂಡ್ ಹಾಕಿದೆಯೇ ಲಗಾಮು? ಸಿದ್ದರಾಮಯ್ಯ ಅವಧಿಯಲ್ಲಿದ್ದ ಸ್ವಾತಂತ್ರ್ಯ ಈಗಿಲ್ಲವೇಕೆ?

June 11, 2026
ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

June 11, 2026

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPABJPCabinet Meetingj.c madhuswamiobc reservationveerashiva-lingayath
ShareTweetSendShare
Join us on:

Related Posts

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಬೆಂಗಳೂರಿನಲ್ಲಿ ಆಡಳಿತ ದೆಹಲಿಯಲ್ಲಿ ತೀರ್ಮಾನ: ಡಿಕೆಶಿ ಸರ್ಕಾರಕ್ಕೆ ಹೈಕಮಾಂಡ್ ಹಾಕಿದೆಯೇ ಲಗಾಮು? ಸಿದ್ದರಾಮಯ್ಯ ಅವಧಿಯಲ್ಲಿದ್ದ ಸ್ವಾತಂತ್ರ್ಯ ಈಗಿಲ್ಲವೇಕೆ?

by Shwetha
June 11, 2026
0

ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಈಗ ಹೊಸ ಶಕ್ತಿ ಸಮೀಕರಣವೊಂದು ಮುನ್ನೆಲೆಗೆ ಬಂದಿದೆ. ಹಿಂದೆಂದಿಗಿಂತಲೂ ಹೆಚ್ಚಾಗಿ ರಾಜ್ಯ ಸರ್ಕಾರದ ಪ್ರತಿಯೊಂದು ನಡೆಯೂ ದೆಹಲಿಯಿಂದಲೇ ನಿಯಂತ್ರಿಸಲ್ಪಡುತ್ತಿದೆಯೇ ಎಂಬ ಅನುಮಾನ ರಾಜಕೀಯ...

ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

ಕೇಶವಕೃಪಕ್ಕೆ ಬರಲು ನಾನು ಸಿದ್ಧ, ತಾಕತ್ತಿದ್ದರೆ ನೋಂದಣಿ ದಾಖಲೆ ತೋರಿಸಿ: ಸಂಘಕ್ಕೆ ಪ್ರಿಯಾಂಕ್‌ ಖರ್ಗೆ ಓಪನ್ ಚಾಲೆಂಜ್

by Shwetha
June 11, 2026
0

ಬೆಂಗಳೂರು: ಆರ್‌ಎಸ್‌ಎಸ್‌ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸಿ.ಟಿ. ರವಿ ನೀಡಿದ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಆರ್‌ಎಸ್‌ಎಸ್‌ ಇತಿಹಾಸವನ್ನು...

ರಾಜ್ಯಸಭಾ ಟಿಕೆಟ್ ಮಿಸ್; ಹೆಚ್‌ಡಿ ದೇವೇಗೌಡರು ಹೇಳಿದ್ದೇನು?

ರಾಜ್ಯಸಭಾ ಟಿಕೆಟ್ ಮಿಸ್; ಹೆಚ್‌ಡಿ ದೇವೇಗೌಡರು ಹೇಳಿದ್ದೇನು?

by Shwetha
June 11, 2026
0

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ರಾಜ್ಯಸಭೆಗೆ ಮರುನಾಮನಿರ್ದೇಶನಗೊಳ್ಳದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಸಂಬಂಧವು ಯಾವುದೇ ಹುದ್ದೆ ಅಥವಾ ರಾಜ್ಯಸಭಾ...

ಚುನಾವಣಾ ಆಯೋಗ ಮೋದಿಯವರ ಕಪಿಮುಷ್ಟಿಯಲ್ಲಿದೆ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರದ ಹಿಂದೆ ಬಿಜೆಪಿಯ ಹಗಲು ದರೋಡೆ ಎಂದ ಸಿದ್ದರಾಮಯ್ಯ

ಚುನಾವಣಾ ಆಯೋಗ ಮೋದಿಯವರ ಕಪಿಮುಷ್ಟಿಯಲ್ಲಿದೆ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರದ ಹಿಂದೆ ಬಿಜೆಪಿಯ ಹಗಲು ದರೋಡೆ ಎಂದ ಸಿದ್ದರಾಮಯ್ಯ

by Shwetha
June 11, 2026
0

ಬೆಂಗಳೂರು: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿದೊಡ್ಡ ಅಣಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-06-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
June 11, 2026
0

ದಿನ ಭವಿಷ್ಯ : 11-06-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮಲ್ಲಿರುವ ಆತ್ಮವಿಶ್ವಾಸ ಹೊಸ ಕೆಲಸಗಳನ್ನು ಕೈಗೊಳ್ಳಲು ಪ್ರೇರಣೆ ನೀಡುತ್ತದೆ. ಉದ್ಯೋಗ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram