ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

admin by admin
February 13, 2026
in Newsbeat, Sports, ಕ್ರೀಡೆ
the elite badminton team prasanna yedekeri

the elite badminton team prasanna yedekeri

Share on FacebookShare on TwitterShare on WhatsappShare on Telegram

ಪ್ರಸನ್ನ ಎಡಿಕೇರಿ..!
ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು ಮುನ್ನಡೆಸಲಿದ್ದಾರೆ. ಶಾಸಕರಾದ ಡಾ.ಮಂಥರ್ ಗೌಡ ಅವರು ತಂಡದ ಉಪನಾಯಕನಾಗಿದ್ದಾರೆ.

the elite badminton team
the elite badminton team

ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ಫ್ರಾಂಚೈಸಿ ಮಾಲೀಕರಾದ ಪ್ರಸನ್ನ ಎಡಿಕೇರಿ ಅವರ ಕಿರುಪರಿಚಯ

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಪ್ರಸನ್ನ ಎಡಿಕೇರಿ.
ಬದುಕಿನಲ್ಲಿ ಸ್ಪಷ್ಟ ಗುರಿ.. ಸಾಧಿಸುವ ಛಲ.. ದೂರದೃಷ್ಟಿಯ ಯೋಚನೆ, ನಿಖರವಾದ ಯೋಜನೆ, ತಾನು ಮಾಡುವ ಕೆಲಸದಲ್ಲಿ ಶಿಸ್ತು, ಬದ್ಧತೆಯನ್ನು ಮೈಗೂಡಿಸಿಕೊಂಡಾಗ ಏನು ಬೇಕಾದ್ರೂ ಸಾಧಿಸಬಹುದು. ಯಾವುದು ಕೂಡ ಅಸಾಧ್ಯವಲ್ಲ ಎಂಬುದಕ್ಕೆ ಸ್ಪಷ್ಟ ನಿದರ್ಶನ ಪ್ರಸನ್ನ ಎಡಿಕೇರಿ.

ಹೌದು, ಪ್ರಸನ್ನ ಒಬ್ಬ ಯಶಸ್ವಿ ಉದ್ಯಮಿ. ಭಾರತದ ಕಾರ್ಪೋರೇಟ್ ಜಗತ್ತಿನಲ್ಲಿ ಛಾಪು ಮೂಡಿಸಿರುವ ಲೀಡಿಂಗ್ ಎಡ್ಜ್ ಅಡ್ವರ್ಟೈಸಿಂಗ್ ಇಂಡಿಯಾ ಪ್ರೆöÊವೇಟ್ ಲಿಮಿಟೆಡ್‌ನ ಸಂಸ್ಥಾಪಕ. ಸುಮಾರು 25 ವರ್ಷಗಳ ಹಿಂದೆ ಪದವಿ ಶಿಕ್ಷಣ ಮುಗಿಸಿಕೊಂಡು ಬದುಕು ಕಟ್ಟಿಕೊಳ್ಳಲು ಮಾಯನಗರಿ ಬೆಂಗಳೂರಿಗೆ ಕಾಲಿಟ್ಟಾಗ ಗೊತ್ತು ಗುರಿ ಇರಲಿಲ್ಲ. ಉದ್ಯೋಗಕ್ಕಾಗಿ ಹುಡುಕಾಟ ನಡೆಸಿದ ಪ್ರಸನ್ನ ಅವರು, ಉದಯನಗರದಲ್ಲಿ ಖಾಸಗಿ ಕಂಪೆನಿಯೊAದರಲ್ಲಿ ಲೆಕ್ಕಪಾಲಕರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದ್ರು. ನಂತ್ರ ತಮ್ಮ ಆಸಕ್ತಿ ಮತ್ತು ಸಾಮರ್ಥದ ಆಧಾರದ ಮೇಲೆ ಮಾರ್ಕೆಟಿಂಗ್ ಮತ್ತು ಜಾಹೀರಾತು ರಂಗಕ್ಕೆ ಪ್ರವೇಶಿಸಿದ್ರು. ಸುಮಾರು ೧೩ ವರ್ಷಗಳ ಕಾಲ ವಿವಿಧ ಬಹುರಾಷ್ಟಿಯ ಕಂಪೆನಿಗಳಲ್ಲಿ ವಿಭಿನ್ನ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ರು. ಪ್ರತಿಯೊಂದು ಅನುಭವ ಕೂಡ ಪ್ರಸನ್ನ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಂತೆ ಮಾಡಿತ್ತು. ಜಾಹೀರಾತು ಕ್ಷೇತ್ರಗಳಲ್ಲಿ ಚಿರಪರಿಚಿತರಾಗಿದ್ದ ಪ್ರಸನ್ನ ತನ್ನದೇ ಸಂಸ್ಥೆಯೊAದನ್ನು ಕಟ್ಟುವ ಸಾಹಸಕ್ಕೆ ಕೈ ಹಾಕಿದ್ರು. ಆಗ ಅವರಿಗೆ ಬೆಂಬಲವಾಗಿ ನಿಂತಿದ್ದು ಪತ್ನಿ ದೀಪ್ತಿ ಕೆದಂಬಾಡಿ.

೨೦೧೩ರಲ್ಲಿ ಬೆಂಗಳೂರು ಅನ್ನು ಕೇಂದ್ರವಾಗಿಟ್ಟುಕೊAಡು ಆರಂಭವಾದ ಲೀಡಿಂಗ್ ಎಡ್ಜ್ ಅಡ್ವರ್ಟೈಸಿಂಗ್ ಇಂಡಿಯಾ ಪ್ರವೈಟ್ ಲಿಮಿಟೆಡ್ ಸಂಸ್ಥೆ ಈಗ ದೇಶದ ಪ್ರಮುಖ ಜಾಹೀರಾತು ಸಂಸ್ಥೆಯಾಗಿ ಹೊರಹೊಮ್ಮಿದೆ. ಕರ್ನಾಟಕ, ಚೆನ್ನೆöÊ ಹೈದ್ರಬಾದ್, ಕೊಲ್ಕತ್ತಾ ಸೇರಿ ದೇಶದ 25 ರಾಜ್ಯಗಳಲ್ಲಿ ಅಡ್ವರ್ಟೈಸಿಂಗ್ ಸಂಸ್ಥೆಯಾಗಿ ತನ್ನ ನೆಟ್‌ವರ್ಕ್ ಅನ್ನು ವಿಸ್ತರಿಸಿದೆ. ಕಳೆದ ೧೩ ವರ್ಷಗಳಿಂದ ಪ್ಯಾನ್ ಇಂಡಿಯಾ ನೆಟ್ ವರ್ಕ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಲೀಡಿಂಗ್ ಎಡ್ಜ್ ಸಂಸ್ಥೆಯು ಡೈರೆಕ್ಟ್ ಮತ್ತು ಇನ್ ಡೈರೆಕ್ಟ್ ಕ್ಲೆöÊಂಟ್‌ಗಳನ್ನು ಹೊಂದಿದೆ. ಅಲ್ಲದೆ ವೃತ್ತಿಪರ ಹಾಗೂ ಅನುಭವಿ ಸಿಬ್ಬಂದಿಗಳ ಮೂಲಕ ಗ್ರಾಹಕರ ಮನ ಗೆಲ್ಲಲು ಸಫಲವಾಗಿದೆ. ಉತ್ಪನ್ನಗಳ ಬ್ರಾö್ಯಂಡ್ ವ್ಯಾಲ್ಯೂ ಹೆಚ್ಚಿಸಲು, ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗುವಂತೆ ಮಾಡಲು ಯೋಜನೆಗಳನ್ನು ನಿರ್ಮಿಸುವುದು ಮತ್ತು ಅದನ್ನು ಅನುಷ್ಠಾನಗೊಳಿಸುವುದರಲ್ಲಿ ಲೀಡಿಂಗ್ ಎಡ್ಜ್ ಮುಂಚೂಣಿಯಲ್ಲಿದೆ. ಹಾಗೇ ಮನೆಗಳ ಮೇಲೆ ಜಾಹೀರಾತು, ಸಿನಿಮಾಗಳಲ್ಲಿ ಜಾಹೀರಾತು, ಮಾಲ್ ಮೀಡಿಯಾ ಅಡ್ವರ್ಟೈಸಿಂಗ್, ಬಿಟಿಎಲ್ ಆಕ್ಟಿವಿಟೀಸ್, ಈವೆಂಟ್ಸ್ & ಡೆಕೋರ್, ಕ್ರಿಯೇಟಿವ್ ಏಜೆನ್ಸಿಗಳ ಸೇವೆಗಳನ್ನು ನೀಡುತ್ತಿದೆ.

ಪ್ರಸನ್ನ ಎಡಿಕೇರಿ ಅವರು, ಕೊಡುಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬಳ್ಳಮಾವತಿ ಗ್ರಾಮದವರು. ಸೇನಾ ಕುಟುಂಬದಲ್ಲಿ ಜನಿಸಿದ್ದ ಇವರು, ಭಾರತೀಯ ಸೇನೆಯಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸಿದ್ದ ಕುಶಾಲಪ್ಪ ಮತ್ತು ರಾಧಾ ಕುಶಾಲಪ್ಪ ದಂಪತಿಗಳ ಏಕೈಕ ಪುತ್ರ. ತಂದೆಯ ಸೇನಾ ಜೀವನದ ಶಿಸ್ತು, ಶ್ರಮ ಹಾಗೂ ತಾಯಿಯಿಂದ ಪಡೆದ ಸಂಸ್ಕಾರಗಳು ಅವರ ವ್ಯಕ್ತಿತ್ವವನ್ನು ಅರ್ಥಪೂರ್ಣವಾಗಿ ರೂಪಿಸಿದೆ. ತನ್ನ ಪ್ರತಿ ಹೆಜ್ಜೆಯಲ್ಲೂ ನೆರಳಾಗಿ ನಿಂತಿರುವ ಪತ್ನಿ ದೀಪ್ತಿ ಕೆದಂಬಾಡಿ ಅವರು, ಕೊಡಗಿನ ಚೆಟ್ಟಿಮಾನಿ ಜಯಪ್ರಕಾಶ್ ಕೆದಂಬಾಡಿ ಮತ್ತು ಚೊಂಡಮ್ಮ ದಂಪತಿಯ ಪುತ್ರಿ. ಇವರಿಗೆ ಪರಿನಿತ್ ಎಡಿಕೇರಿ ಎಂಬ ಪುತ್ರನಿದ್ದು, ಬೆಂಗಳೂರು ಉತ್ತರದ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ದ್ವಿತೀಯ ಪಿಯೂಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ಶೂಟಿಂಗ್ ನಲ್ಲಿ ರಾಷ್ಟಿಯ ಶೂಟಿಂಗ್ ಶಿಬಿರದಲ್ಲಿ ಸೇರ್ಪಡೆಗೊಂಡಿರುವ ಪರಿನಿತ್ ಒಲಿಂಪಿಕ್ಸ್ನಲ್ಲಿ ಸ್ಪರ್ಧೆ ಮಾಡಿ ಪದಕ ಗೆಲ್ಲಬೇಕು ಎಂಬ ಮಹಾದಾಸೆಯನ್ನಿಟ್ಟುಕೊಂಡಿದ್ದಾರೆ.

ಸಮಾಜ ಸೇವೆ

ಕೊಡಗಿನ ಕುಗ್ರಾಮವೊಂದರಿAದ ಬರಿಗೈಲಿನಲ್ಲಿ ಬೆಂಗಳೂರಿಗೆ ಬಂದಿದ್ದ ಪ್ರಸನ್ನ ಅವರು, ಇಂದು ನೂರಾರು ಕುಟುಂಬಗಳಿಗೆ ಅನ್ನದಾತರಾಗಿದ್ದಾರೆ. ಉದ್ಯಮದ ಜೊತೆಗೆ ಸಮಾಜ ಸೇವೆ, ಧಾರ್ಮಿಕ ಸೇವೆ, ಕ್ರೀಡಾ ಕ್ಷೇತ್ರಕ್ಕೂ ಸತತವಾಗಿ ಪ್ರೋತ್ಸಾಹ, ಬೆಂಬಲವನ್ನು ನೀಡುತ್ತಿದ್ದಾರೆ. ಅದರಲ್ಲೂ ೨೦೧೮ರಲ್ಲಿ ತನ್ನೂರಿನಲ್ಲಿ ಸಂಭವಿಸಿದ್ದ ಜಳಪ್ರಳಯದಿಂದ ಸಂತ್ರಸ್ಥ ಕುಟುಂಬಗಳಿಗೆ ನೆರವಿನ ಹಸ್ತ ನೀಡಿದ್ರು. ಸಮಾಜ ಸೇವೆಯ ಮಹತ್ವವನ್ನು ಅರಿತುಕೊಂಡ ಪ್ರಸನ್ನ ಅವರು ತಮ್ಮ ಆದಾಯ ಒಂದು ಭಾಗವನ್ನು ಸಮಾಜ ಸೇವೆಗಾಗಿಯೇ ಮುಡುಪಾಗಿಟ್ಟಿದ್ದಾರೆ. ಹಾಗೇ ಕೊಡಗಿನಲ್ಲಿ ನಡೆಯುವ ಸಮುದಾಯದ ಕ್ರೀಡಾಕೂಟ, ಇನ್ನಿತರ ಕ್ರೀಡಾಕೂಟಗಳಿಗೂ ಉತ್ತೇಜನ ನೀಡುತ್ತಿದ್ದಾರೆ. ಎಲೈಟ್ ಕ್ರಿಕೆಟ್ ಕ್ಲಬ್ ಮೂಲಕ ಯುವ ಆಟಗಾರರ ಪ್ರತಿಭೆ ಅನಾರವಣಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇದೀಗ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್‌ನ ಮಾಲೀಕರಾಗಿದ್ದಾರೆ.
ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ಪ್ರಸನ್ನ ಎಡಿಕೇರಿ ಅವರು ಜ್ಞಾನ, ಅನುಭವ, ಸಂಪನ್ಮೂಲಗಳನ್ನು ಬಳಸಿಕೊಂಡು ಸಮಾಜ, ಸಮುದಾಯದ ಅಭಿವೃದ್ಧಿಗೆ ಕೈ ಜೋಡಿಸುತ್ತಿದ್ದಾರೆ. ವ್ಯವಹಾರದ ಯಶಸ್ಸು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಸಮತೋಲನದಲ್ಲಿಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಜನನಾಯಕನಾಗಬೇಕು ಎಂಬ ಸ್ಪಷ್ಟ ಗುರಿಯನ್ನಿಟ್ಟುಕೊಂಡಿದ್ದಾರೆ. ೨೦೨೮ರ ಚುನಾವಣೆಯಲ್ಲಿ ಮಡಿಕೇರಿ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಂಡಿರುವ ಪ್ರಸನ್ನ ಈಗಿನಿಂದಲೇ ಕಾರ್ಯಪ್ರವೃತ್ತರಾಗಿದ್ದಾರೆ. ಉದ್ಯಮಿಯಾಗಿ, ಸಮಾಜ ಸೇವಕನಾಗಿ, ಧಾರ್ಮಿಕ ಸೇವಕನಾಗಿ, ಕ್ರೀಡಾ ಪ್ರೋತ್ಸಾಹಕನಾಗಿ ಗುರತಿಸಿಕೊಂಡಿರುವ ಪ್ರಸನ್ನ ಎಡಿಕೇರಿ ಜನಸೇವಕನಾಗಿ ಬೆಳೆಯಲಿ.

 

Source: Is the advertising world's magician, 'The Elite Badminton Club', also performing magic at the CM Cup?
Via: Is the advertising world's magician, 'The Elite Badminton Club', also performing magic at the CM Cup?
Tags: #cmcup#cmcupbadminton2026#drmanthargowda#drselvakumar#saakshatvbengaluruMadikeri
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram