ಬೀದಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟರೇ ಸಚಿವ ಸ್ಥಾನ ಸಿಗುತ್ತಾ: ಎಂ. ಪಿ ರೇಣುಕಾಚಾರ್ಯ Saaksha Tv
ದಾವಣಗೆರೆ: ಯಾರು ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ. ಅವರು ಎಂಟಿಆರ್ ಫುಡ್ ಇರಬೇಕು. ಆದರೆ ನಾನು ಎಂಟಿಆರ್ ಫುಡ್ ಅಲ್ಲವೆಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾದಿ ಬೀದಿಯಲ್ಲಿ ಹೋರಾಟ ಮಾಡಿಯೇ ಮೂರು ಬಾರಿ ಶಾಸಕನಾಗಿದ್ದೇನೆ. ಬೀದಿಯಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟರೇ ಸಚಿವ ಸ್ಥಾನ ಸಿಗುತ್ತಾ? ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಅವಕಾಶ ಕೊಡಲೇಬೇಕೆಂದು ಕೇಳಿದ್ದೇನೆ ಎಂದು ಹೇಳಿದರು.
ಎರಡು ದಿನಗಳ ಹಿಂದೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಫೋನ್ ಮಾಡಿದ್ದರು. ಬಹಿರಂಗ ಹೇಳಿಕೆ ಕೊಡಬೇಡಿ, ಅದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತದೆ. ಅಲ್ಲದೇ ದೆಹಲಿಗೆ ಬರಲು ಹೇಳಿದ್ದಾರೆ. ಇದೇ ಫೆ.8, 9,10 ರಂದು ದೆಹಲಿಗೆ ಬರುವಂತೆ ತಿಳಿಸಿದ್ದಾರೆ. ಅರುಣ್ ಸಿಂಗ್ರನ್ನ ಭೇಟಿ ಮಾಡಿ ಎಲ್ಲ ವಿಚಾರಗಳ ಬಗ್ಗೆ ಮಾತನಾಡಲಿದ್ದೇನೆ. ನಾನು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದೇನೆ. ನನ್ನ ತಪ್ಪಿದ್ದರೆ ವರಿಷ್ಠರು ಯಾವುದೇ ಕ್ರಮಬೇಕಾದರೂ ಕೈಗೊಳ್ಳಲಿ ಎಂದರು.
ಈ ಬಾರಿ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಹಾಗೂ ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ಸಿಎಂ ಕೂಡ ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮೂರು ಸಲ ಶಾಸಕ ಆಗಿದ್ದೇನೆ. ಸಚಿವ ಸ್ಥಾನ ನಿಭಾಯಿಸುವ ಶಕ್ತಿ ಹೊಂದಿರುವೆ. ನಾನು ದೆಹಲಿಗೆ ಹೋಗುವ ಬಗ್ಗೆ ಶಾಸಕ ಯತ್ನಾಳ್ ಜೊತೆ ಮಾತನಾಡಿಲ್ಲ, ಬಳಿಕ ಯತ್ನಾಳ್ರೊಂದಿಗೆ ಮಾತನಾಡುವೆ ಎಂದು ಸ್ಪಷ್ಟಪಡಿಸಿದರು.