ಕೊನೆಯ ಪಂದ್ಯದಲ್ಲಾದರೂ ಪ್ಯಾಡ್ ಕಟ್ಟುತ್ತಾರ ಇಶಾನ್ ಕಿಶಾನ್…
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ODI ಸರಣಿಯ ಎರಡು ಪಂದ್ಯಗಳು ಮುಕ್ತಾಯಗೊಂಡಿವೆ. ಈ ಎರಡು ಪಂದ್ಯಗಳನ್ನ ಟೀಂ ಇಂಡಿಯಾ ಗೆದ್ದು 2-0 ಅಂತರದಲ್ಲಿ ಸರಣಿ ಈಗಾಗಲೇ ತನ್ನದಾಗಿಸಿಕೊಂಡಿದೆ. ಮೂರನೇ ಏಕದಿನ ಪಂದ್ಯ ಜನವರಿ 15ರಂದು ನಡೆಯಲಿದೆ. ಮುಗಿದು ಹೋಗಿರುವ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾದ ಎಡಗೈ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಗೆ ಅವಕಾಶ ಸಿಗಲಿಲ್ಲ. ಇದರಿಂದಾಗಿ ಟೀಂ ಇಂಡಿಯಾದ ಹಲವು ಮಾಜಿ ಆಟಗಾರರು ನಾಯಕ ರೋಹಿತ್ ನಿರ್ಧಾರವನ್ನು ಟೀಕಿಸುತ್ತಿದ್ದಾರೆ. ಎರಡು ಪಂದ್ಯಗಳಲ್ಲಿ ಅವಕಾಶ ಸಿಗದ ಇಶಾನ್ ಕಿಶನ್ ಮೂರನೇ ಏಕದಿನ ಪಂದ್ಯದಲ್ಲಿ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ….
ಶ್ರೀಲಂಕಾ ವಿರುದ್ಧದ ಸರಣಿಗೂ ಮುನ್ನ ಬಾಂಗ್ಲಾದೇಶದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅತ್ಯದ್ಭುತ ಇನ್ನಿಂಗ್ಸ್ ಕಟ್ಟಿದ್ದರು. ಕೊನೆಯ ಏಕದಿನ ಪಂದ್ಯದಲ್ಲಿ ದ್ವಿಶತಕ ಬಾರಿಸಿದ್ದ ಇಶಾನ್ 131 ಎಸೆತಗಳಲ್ಲಿ 210 ರನ್ ಗಳಿಸಿದರು. ಅನೇಕ ಮಾಜಿ ಕ್ರಿಕೆಟಿಗರು ಮತ್ತು ಇಶಾನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಶಾನ್ ಕಿಶನ್ ಗೆ ಅವಕಾಶ ನೀಡದ್ದಕ್ಕೆ ತಂಡದ ಟೀಮ್ ಮ್ಯಾನೇಜ್ಮೆಂಟ್ ಅನ್ನ ದೂರುತ್ತಿದ್ದಾರೆ.
ಈ ಕುರಿತು ನಾಯಕ ರೋಹಿತ್ ಶರ್ಮಾ ಶ್ರೀಲಂಕಾ ಎರಡನೇ ಪಂದ್ಯ ಮುಗಿದ ಬಳಿಕ ಮಾತನಾಡಿ ಎಡಗೈ ಬ್ಯಾಟ್ಸಮನ್ ಇಲ್ಲದಿರುವುದರಿಂದ ನಿಮಗೆ ಸಮಸ್ಯೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.
“ಅಗ್ರ ಕ್ರಮಾಂಕದಲ್ಲಿ ಎಡಗೈ ಬ್ಯಾಟ್ಸ್‌ಮನ್ ಇರುವುದು ಒಳ್ಳೆಯದು. ಟೀಂ ಇಂಡಿಯಾದಲ್ಲಿ ಎಡಗೈ ಬ್ಯಾಟ್ಸ್‌ಮನ್‌ಗಳು (ಇಶಾನ್ ಕಿಶನ್, ಶಿಖರ್ ಧವನ್) ಕಳೆದ ವರ್ಷ ಸಾಕಷ್ಟು ರನ್ ಗಳಿಸಿದ್ದಾರೆ. ಈ ಕ್ರಮಾಂಕದಲ್ಲಿ ನಮಗೆ ಎಡಗೈ ಬ್ಯಾಟ್ಸ್‌ಮನ್ ಕೂಡ ಬೇಕು. ಆದರೆ ಈಗಿನ ಪರಿಸ್ಥಿತಿಯಲ್ಲಿ ಬಲಗೈ ಬ್ಯಾಟ್ಸ್‌ಮನ್‌ಗಳು ಎಂತಹ ಸಾಮರ್ಥ್ಯ ಹೊಂದಿದ್ದಾರೆಂಬುದು ನಮಗೆ ತಿಳಿದಿದೆ. ಸದ್ಯಕ್ಕೆ ಆರಂಭಿಕ ಸಂಯೋಜನೆ ಚೆನ್ನಾಗಿದೆ. ಮೂರನೇ ಏಕದಿನ ಪಂದ್ಯದಲ್ಲಿ ಪಿಚ್ ಆಧರಿಸಿ ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಅಂತಿಮ ತಂಡಕ್ಕೆ ಸೇರಿಸುವ ಸಾಧ್ಯತೆಯನ್ನು ಪರಿಗಣಿಸುವುದಾಗಿ” ಅವರು ಹೇಳಿದ್ದಾರೆ.
ಹಾಗಾಗಿ ಟೀಂ ಇಂಡಿಯಾ ಸರಣಿ ಗೆಲ್ಲುವುದರ ಜೊತೆಗೆ ಮೂರನೇ ODI ಪಂದ್ಯದಲ್ಲಿ ಪ್ರಯೋಗಕ್ಕೆ ಮುಂದಾಗಿಲಿದೆ. ಈ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಇಶಾನ್ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.
Ishan Kishan : Ishan Kishan will tie the pad even in the last match…








