ಇಸ್ರೇಲ್ ಹಾಗೂ ಲೆಬನಾನ್ ಮಧ್ಯೆ ಭೀಕರ ದಾಳಿ ನಡೆಯುತ್ತಿದೆ. ಲೆಬನಾನ್ ನ ದಕ್ಷಿಣ ಬೈರುತ್ ನಲ್ಲಿರುವ ಹಿಜ್ಬುಲ್ಲಾದ ಪ್ರಮುಖ ಭದ್ರಕೋಟೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ.
ಈ ದಾಳಿಯಿಂದ ಜನನಿಬಿಡ ನಾಗರಿಕ ಪ್ರದೇಶಗಳಲ್ಲಿ ಭಯ ವಾತವರಣ ಸೃಷ್ಟಿಯಾಗಿದೆ. ಇಸ್ರೇಲ್ ಪಡೆಗಳು ಗಾಜಾದಿಂದ ಲೆಬನಾನ್ನತ್ತ ಮುಖ ಮಾಡಿದೆ ಎಂದು ಹೇಳಲಾಗಿದೆ. ದಾಳಿಯಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಲೆಬನಾನ್ ಹಿಜ್ಬುಲ್ಲಾ ಉಗ್ರರ ಭದ್ರಕೋಟೆಯಾಗಿದೆ ಅದನ್ನು ನಾಶ ಮಾಡುವವರೆಗೆ ನಮ್ಮ ಈ ದಾಳಿ ಮುಂದುವರಿಯುತ್ತದೆ ಎಂದು ಇಸ್ರೇಲ್ ಹೇಳಿದೆ.
ಈ ದಾಳಿಯಿಂದ ತಪ್ಪಿಸಿಕೊಳ್ಳಲು ಹಸನ್ ನಸ್ರಲ್ಲಾಹ್ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇಸ್ರೇಲಿ ರಕ್ಷಣಾ ಪಡೆಗಳು ದಕ್ಷಿಣ ಲೆಬನಾನ್‌ನಲ್ಲಿರುವ ಹಿಜ್ಬುಲ್ಲಾದ ಕ್ಷಿಪಣಿ ಘಟಕದ ಕಮಾಂಡರ್ ಮುಹಮ್ಮದ್ ಅಲಿ ಇಸ್ಮಾಯಿಲ್ ಇರಾನ್ ಬೆಂಬಲಿತ ಸೇನಾಪಡೆಯ ಇತರ ಹಿರಿಯ ಅಧಿಕಾರಿಗಳ ಮೇಲೆ ಏರ್ ಸ್ಟ್ರೈಕ್ ದಾಳಿಗಳನ್ನು ಮಾಡಿ ಹತ್ಯೆಗೆ ಕಾರಣವಾಗಿದೆ.
ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶುಕ್ರವಾರ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ ವಿಶ್ವ ನಾಯಕರನ್ನು ಉದ್ದೇಶಿಸಿ ಮಾತನಾಡಿ, ಉತ್ತರದ ಗಡಿಯನ್ನು ಸಂಪೂರ್ಣವಾಗಿ ಸುರಕ್ಷಿತಗೊಳಿಸುವವರೆಗೆ ಇಸ್ರೇಲ್ ಹೆಜ್ಬೊಲ್ಲಾ ವಿರುದ್ಧ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರೆಸುತ್ತದೆ ಎಂದು ಪ್ರತಿಜ್ಞೆ ಮಾಡಿದ್ದಾರೆ.