ಟೆಲ್ ಅವಿವ್ : ಇಸ್ರೇಲ್ (Israel) ಮೇಲೆ ಹಮಾಸ್ ಉಗ್ರರು ನಡೆಸಿರುವ ದಾಳಿಯಲ್ಲಿ (Hamas Attack) ಇಲ್ಲಿಯವರೆಗೂ 398 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇಸ್ರೇಲ್ ಸೇನೆ ನಡೆಸಿದ ಪ್ರತಿ ದಾಳಿಯಲ್ಲಿ 230ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಾಳಿಯ ಬೆನ್ನಲ್ಲಿಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕರಾಳ ದಿನ ಎಂದು ಘೋಷಿಸಿದ್ದಾರೆ. ಉಗ್ರರ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ. ಈಗಾಗಲೇ ಉಗ್ರರ ಮೇಲೆ ಯುದ್ಧ ಘೋಷಿಸಲಾಗಿದ್ದು, ದೇಶದಲ್ಲಿ ತರ್ತು ಪರಿಸ್ಥಿತಿ ಜಾರಿ ಮಾಡಲಾಗಿದೆ. ಅಲ್ಲದೇ ಉಗ್ರರ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಹೇಳಿದ್ದಾರೆ.
ಹಮಾಸ್ ಉಗ್ರರು 50ಕ್ಕೂ ಅಧಿಕ ಇಸ್ರೇಲ್ ಸೈನಿಕರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದೆ. ಅಲ್ಲದೇ ದೇಶದ ಒಳಗೆ ನುಗ್ಗಿ ಪ್ರಮುಖ ನಗರಗಳ ಮೇಲೆ ದಾಳಿ ನಡೆಸಿ ಸಾರ್ವಜನಿಕರ ಕಗ್ಗೊಲೆ ಮಾಡುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಸೇನೆ ಹೋರಾಡುತ್ತಿದೆ ಎಂದು ಸೇನಾ ವಕ್ತಾರ ರಿಚರ್ಡ್ ಹೆಚ್ಟ್ ಹೇಳಿದ್ದಾರೆ.
ಭಾರತೀಯ ರಾಯಭಾರ ಕಚೇರಿಯು ತನ್ನ ನಾಗರಿಕರನ್ನು ಜಾಗರೂಕರಾಗಿರುವಂತೆ ಎಚ್ಚರಿಸಿದೆ. ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಇಸ್ರೇಲ್ಗೆ ಬೆಂಬಲ ಸೂಚಿಸಿದ್ದಾರೆ.