ಟೆಲ್ ಅವಿವ್: ಹಮಾಸ್ (Hamas) ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಸುಮಾರು 250 ಜನರನ್ನು ಇಸ್ರೇಲ್ ಸೈನಿಕರು ರಕ್ಷಿಸಿದ್ದಾರೆ.
ಗಾಝಾ (Gaza) ಭದ್ರತಾ ಬೇಲಿ ಪ್ರದೇಶದ ಬಳಿ 60ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರನ್ನು ಕೊಲೆ ಮಾಡಿ ಒತ್ತೆಯಾಳುಗಳನ್ನು ರಕ್ಷಿಸಿದ್ದಾರೆ. ರಕ್ಷಿಸಿರುವ ಕುರಿತು ಹೆಡ್ಕ್ಯಾಮ್ ದೃಶ್ಯಗಳನ್ನು ಐಡಿಎಫ್ ಎಕ್ಸ್ ಪೋಸ್ಟ್ನಲ್ಲಿ ಹಂಚಿಕೊಂಡಿದೆ.
ಐಡಿಎಫ್ ಈ ಕುರಿತು ಬರೆದಿದ್ದು, ಫ್ಲೋಟಿಲ್ಲಾ 13 ಎಲೈಟ್ ಘಟಕವನ್ನು ಅ. 7ರಂದು ಸುಫಾ ಮಿಲಿಟರಿ ಪೋಸ್ಟ್ನ ನಿಯಂತ್ರಣ ಮರಳಿ ಪಡೆಯುವ ಜಂಟಿ ಪ್ರಯತ್ನದಲ್ಲಿ ಗಾಜಾ ಭದ್ರತಾ ಬೇಲಿಯ ಸುತ್ತಲಿನ ಪ್ರದೇಶಕ್ಕೆ ನಿಯೋಜಿಸಲಾಗಿತ್ತು. ಸೈನಿಕರು 250 ಒತ್ತೆಯಾಳುಗಳನ್ನು ಜೀವಂತವಾಗಿ ರಕ್ಷಿಸಿದ್ದಾರೆ. 60ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎನ್ನಲಾಗಿದೆ. ಅಲ್ಲದೇ, ಹಮಾಸ್ ದಕ್ಷಿಣ ನೌಕಾ ವಿಭಾಗದ ಉಪ ಕಮಾಂಡರ್ ಮುಹಮ್ಮದ್ ಅಬು ಅಲಿ ಸೇರಿದಂತೆ 26 ಜನರನ್ನು ಬಂಧಿಸಲಾಗಿದೆ ಎಂದು ಹೇಳಿದೆ.
ಇತ್ತೀಚಿನ ವರದಿಗಳಂತೆ, ಇಸ್ರೇಲ್ ನಲ್ಲಿ ಹಮಾಸ್ ಭಯೋತ್ಪಾದಕರ ದಾಳಿಗೆ ಸಾವನ್ನಪ್ಪಿರುವವರ ಸಂಖ್ಯೆ 1,300 ದಾಟಿದೆ. 3,300ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 1,500ಕ್ಕೂ ಹೆಚ್ಚು ಹಮಾಸ್ ಭಯೋತ್ಪಾದಕರ ಮೃತದೇಹಗಳು ಪತ್ತೆಯಾಗಿವೆ.