10 ದಿನಗಳ ಬಳಿಕ ಮತ್ತೆ ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಇಸ್ರೇಲ್
ಇಸ್ರೇಲ್ : ಇಸ್ರೇಲ್ ನಲ್ಲಿ ಕಳೆದ 10 ದಿನಗಳ ಹಿಂದೆ ಕೊರೊನಾ ಹಾವಳಿ ಕಡಿಮೆಯಾಗ್ತಿದ್ದ ಪರಿಣಾಮ ಅಲ್ಲಿನ ಸರ್ಕಾರ ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದಕ್ಕೆ ವಿನಾಯಿತಿ ನೀಡಿತ್ತು. ಇದೀಗ ಕೊರೋನಾ ಮತ್ತೆ ಉಲ್ಪಣಿಸುತ್ತಿರುವುದರಿಂದ ಒಳಾಂಗಣ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಇಸ್ರೇಲ್ ಆರೋಗ್ಯ ಸಚಿವಾಲಯ ಆದೇಶಿಸಿದೆ.
ಈ ಮೂಲಕ ಲಸಿಕೆ ಅಭಿಯಾನ ಯಶಸ್ವಿಯಾಗಿದೆ ಎಂದು ಬೀಗಿದದ್ದ ಇಸ್ರೇಲ್ ಗೆ ಮುಖಭಂಗವಾಗಿದೆ. ಇಸ್ರೇಲ್ ನ ಸಾಂಕ್ರಾಮಿಕ ಪ್ರಕ್ರಿಯೆ ಕಾರ್ಯಪಡೆಯ ಮುಖ್ಯಸ್ಥ ನಾಚ್ಮನ್ ಆಶ್ ಸಾರ್ವಜನಿಕ ರೇಡಿಯೊಗೆ ತಿಳಿಸಿದ್ದು, ದಿನಕ್ಕೆ 100ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿದ್ದು 4 ದಿನಗಳ ನಂತರ ಕಳೆದ ಒಂದು ದಿನದಲ್ಲಿ 227 ಪ್ರಕರಣಗಳು ಪತ್ತೆಯಾಗಿವೆ.
ಮಾಸ್ಕ್ ಧರಿಸುವುದಕ್ಕೆ ವಿನಾಯಿತಿ ನೀಡಿದ್ದು ಇಸ್ರೇಲ್ ಗೆ ಹಿನ್ನಡೆಯಾಗಿದೆ ಎನ್ನಲಾಗಿದೆ. ಹೀಗಾಗಿ ಯಶಸ್ವಿ ವ್ಯಾಕ್ಸಿನೇಷನ್ ಅಭಿಯಾನದ ಹಿನ್ನಲೆಯಲ್ಲಿ ಜೂನ್ 15ರಂದು ತೆಗೆದುಹಾಕಿದ್ದ ಮಾಸ್ಕ್ ಧರಿಸುವ ನಿಯಮವನ್ನು ಮತ್ತೆ ಆರಂಭಿಸಿದೆ.
H-1B ವೀಸಾ ಮರು ಅರ್ಜಿ ಸಲ್ಲಿಕೆಗೆ ಅವಕಾಶ ಕೊಟ್ಟ ಅಮೆರಿಕ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.