ಇಸ್ರೇಲ್ – ಪ್ಯಾಲೆಸ್ಟೈನ್ ಸಂಘರ್ಷದ ವಿಚಾರಕ್ಕೆ ಬಹಿರಂಗವಾಗಿ ಜಗಳವಾಡಿದ ಅಮೆರಿಕಾ – ಫ್ರಾನ್ಸ್
ಇಸ್ರೇಲ್ – ಪ್ಯಾಲೆಸ್ಟೈನ್ ಸಂಘರ್ಷವು ತೀವ್ರವಾಗಿದ್ದು, ಈ ನಡುವೆ ಅಮೆರಿಕಾವು ಇಸ್ರೇಲ್ ಗೆ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ. ಈ ವಿಚಾರವಾಗಿ ವಿಶ್ವಸಂಸ್ಥೆಯೂ ಕಳವಳ ವ್ಯಕ್ತಪಡಿಸಿದೆ.. ಆದ್ರೆ ಇದೇ ವಿಚಾರವಾಗಿ ವಿಶ್ವಸಂಸ್ಥೆಯಲ್ಲಿ ಅಮೆರಿಕ ಮತ್ತು ಫ್ರಾನ್ಸ್ ದೇಶಗಳು ಬಹಿರಂಗವಾಗಿಯೇ ಕಿತ್ತಾಡಿಕೊಂಡಿರೋದು ಕಂಡುಬಂದಿದೆ..
ಅಮೆರಿಕ ವಿರೋಧಿಸುತ್ತದೆ ಎಂದು ಗೊತ್ತಿದ್ದರೂ, ಇಸ್ರೇಲ್ ಮತ್ತು ಪ್ಯಾಲೆಸೈನ್ ನಡುವಿನ ಸಂಘರ್ಷ ಕೊನೆಗೊಳ್ಳಬೇಕು ಹಾಗೂ ಗಾಝಾ ಪಟ್ಟಿಗೆ ಮಾನವೀಯ ನೆರವು ತಲುಪಲು ಅವಕಾಶ ನೀಡಬೇಕು ಎಂಬುದಾಗಿ ಕರೆ ನೀಡುವ ಇನ್ನೊಂದು ನಿರ್ಣಯವನ್ನು ಫ್ರಾನ್ಸ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಿದೆ.
ಸಂಘರ್ಷ ತಕ್ಷಣ ಕೊನೆಗೊಳ್ಳಬೇಕು ಎಂದು ಕರಡು ನಿರ್ಣಯ ಒತ್ತಾಯಿಸುತ್ತದೆ ಹಾಗೂ ಅವಳಿ-ದೇಶ ಪರಿಹಾರದ ನಿಟ್ಟಿನಲ್ಲಿ ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳು ತೀವ್ರಗೊಳ್ಳಬೇಕು ಹಾಗೂ ಈ ಪರಿಹಾರಕ್ಕೆ ಬೆಂಬಲ ನೀಡಬೇಕು ಎಂದು ಕರೆ ನೀಡುತ್ತದೆ ಎಂದು ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
ಕರಡು ನಿರ್ಣಯವನ್ನು ಭದ್ರತಾ ಮಂಡಳಿಯ 15 ದೇಶಗಳಿಗೆ ಒದಗಿಸಲಾಗಿದೆ. ಈ ಬಗ್ಗೆ ನಿರ್ಧರಿಸಲು ಅವುಗಳಿಗೆ ಗುರುವಾರದವರೆಗೆ ಸಮಯಾವಕಾಶವಿದೆ ಎಂದು ರಾಜತಾಂತ್ರಿಕರು ಹೇಳಿದ್ದಾರೆ. ಈ ಬಗ್ಗೆ ಯಾವಾಗ ಮತದಾನ ನಡೆಯಬಹುದು ಎಂಬ ಸೂಚನೆಯನ್ನು ಫ್ರಾನ್ಸ್ ನೀಡಿಲ್ಲ.
ಇತ್ತೀಚಿನ ದಿನಗಳಲ್ಲಿ ಅಮೆರಿಕವು ಇಂಥದೇ ನಿರ್ಣಯಗಳಿಗೆ ಪದೇ ಪದೇ ವೀಟೊ ಚಲಾಯಿಸಿ ತಡೆಹಿಡಿದಿದೆ. ಸಂಘರ್ಷವನ್ನು ಕೊನೆಗೊಳಿಸಲು ತಾನು ಬೇರೆ ದಾರಿಗಳನ್ನು ಹುಡುಕುತ್ತಿದ್ದೇನೆ ಎಂದು ಹೇಳಿದೆ. ಫ್ರಾನ್ಸ್ ನ ನೂತನ ಕರಡು ಪ್ರಸ್ತಾವಕ್ಕೂ ಅಮೆರಿಕ ಕ್ಷಿಪ್ರ ಪ್ರತಿಕ್ರಿಯೆ ನೀಡಿದ್ದು, ಅಗತ್ಯ ಬಿದ್ದರೆ ಮತ್ತೊಮ್ಮೆ ವೀಟೊ ಚಲಾಯಿಸುವುದಾಗಿ ಹೇಳಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








