ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ 4.82 ಕೋಟಿ ಹಣ ಜಪ್ತಿ ಮಾಡಲಾಗಿತ್ತು.
ಈ ಹಣ ವಶಕ್ಕೆ ಪಡೆದ ನಂತರ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಗೆ ಬಿಜೆಪಿ ಅಭ್ಯರ್ಥಿ ಸುಧಾಕರ್ ವಾಟ್ಸಪ್ ಕರೆ ಮಾಡಿ, “ಗೋವಿಂದಪ್ಪಗೆ ಸಹಾಯ ಮಾಡಿ. ಹಣವನ್ನು ವಾಪಸು ಕೊಡಿಸುವಂತೆ” ಹೇಳಿದ್ದಾರೆ. ಗೋವಿಂದಪ್ಪ ಕೂಡ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಪ್ ಮೂಲಕ “Please Help will we great full to you” ಎಂದು ಸಂದೇಶ ಕಳುಹಿಸಿದ್ದಾರೆ. ಇದನ್ನು ಸಾಕ್ಷಿ ಸಮೇತ ಮುನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ನೀಡಿದ್ದಾರೆ. ಆನಂತರ ಎಸ್ಎಸ್ಟಿ ತಂಡದ ಮುಖ್ಯಸ್ಥ ದಶರಥ್ .ವಿ. ಕಂಬಾರ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.