ಬೆಂಗಳೂರು: ನಗರದಲ್ಲಿರುವ ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ.
ಇಲ್ಲಿಯ ಕೋರಮಂಗಲದಲ್ಲಿನ ಕಚೇರಿ, ಇಂದಿರಾನಗರ, ಜಯನಗರ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಮೇಘನಾ ಫುಡ್ಸ್ ಹೆಸರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ನಡೆಸುತ್ತಿರುವ ಕಂಪನಿಯ ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ರಾಜ್ಯ ಹಾಗೂ ಗೋವಾ ಸೇರಿದಂತೆ 10ಕ್ಕೂ ಅಧಿಕ ಪ್ರದೇಶಗಳ ಮೇಲೆ ದಾಳಿ ನಡೆಸಿದೆ. ಸದ್ಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.