ಬೆಂಗಳೂರು: ಇಂದು ನಗರದ ವಿವಿಧೆಡೆ ಐಟಿ ಅಧಿಕಾರಿಗಳು ಬಿಲ್ಡರ್ ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ಶಾಕ್ ನೀಡಿದ್ದಾರೆ.
ಬಿಲ್ಡರ್ ಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದಲ್ಲಿನ ಸುಮಾರು 20ಕ್ಕೂ ಅಧಿಕ ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಕೆಆರ್ ಪುರಂ, ಕೊಡಿಗೇಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಂಜುಂಡೇಶ್ವರ ಇನ್ಫ್ರಾಸ್ಟ್ರಕ್ಚರ್ ಪ್ರೈವೆಟ್ ಲಿಮಿಟೆಡ್ ಸೇರಿದಂತೆ ಹಲವು ಬಿಲ್ಡರ್ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.