ಬೆಂಗಳೂರು : ಕುಟುಂಬದ ಸದಸ್ಯರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಹೋಂ ಕ್ವರಂಟೈನ್ ನಲ್ಲಿದ್ದ ವೈದ್ಯಕೀಯ ಸಚಿವ ಡಾ. ಸುಧಾಕರ್ ಅವರು ಇಂದಿನಿಂದ ಮತ್ತೆ ತಮ್ಮ ಸೇವೆಗೆ ಹಾಜರಾಗಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ತಮ್ಮ ಕ್ವಾರಂಟೈನ್ ಅನುಭವವನ್ನು ಬಿಚ್ಚಿಟ್ಟಿದ್ದಾರೆ.
“ಇಷ್ಟು ದಿನ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದೆ. ಕ್ವಾರಂಟೈನ್ ನಲ್ಲಿದ್ರೂ ನಿತ್ಯ ಕೋವಿಡ್ ಕೆಲಸದಲ್ಲಿ ಮನೆಯಿಂದಲೇ ಭಾಗವಹಿಸ್ತಿದ್ದೆ. ಭೌತಿಕವಾಗಿ ಇವತ್ತಿಂದ ಹೊರಗೆ ಬಂದಿದ್ದೇನೆ. ನಾನು ಆಕ್ಟಿವ್ ಆಗಿದ್ದಿದ್ದರಿಂದ ಮನೆಯಲ್ಲಿ ಕಟ್ಟಿ ಹಾಕಿದಂತೆ ಭಾಸವಾಗುತ್ತಿತ್ತು. ಇದೀಗ ಮತ್ತೆ ಜನರ ಸೇವೆ ಮಾಡುವ ಅವಕಾಶ ಬಂದಿದ್ದು ಸಂತಸ ತಂದಿದೆ. ಎಲ್ಲರ ಹಾರೈಕೆಯಿಂದ ಮತ್ತೆ ಎಲ್ಲರ ಸೇವೆಗೆ ಅವಕಾಶ ಸಿಕ್ಕಿದೆ. ಮತ್ತೆ ಎಂದಿನಂತೆ ಬದ್ಧತೆಯಿಂದ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ನನ್ನ ಕುಟುಂಬದಲ್ಲಿ ಯಾರಿಗೆಲ್ಲ ಪಾಸಿಟಿವ್ ಬಂದಿತ್ತೋ ಅವರೂ ಗುಣಮುಖರಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗುತ್ತಾರೆ ಎಂದು ಸುಧಾಕರ್ ಇದೇ ವೇಳೆ ತಿಳಿಸಿದರು.